ಕೆಜೆಪಿ ಆಟಕ್ಕುಂಟು ಲೆಕ್ಕಕ್ಕಿಲ್ಲ: ಡೀವಿ ವ್ಯಂಗ್ಯ
ಕ.ಪ್ರ.ವಾರ್ತೆ ಚಿಕ್ಕಬಳ್ಳಾಪುರ ಏ. 30-
ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಕೇವಲ ಕಾಂಗ್ರೆಸ್ ಮಾತ್ರ ಎದುರಾಳಿ. ಕೆಜೆಪಿ ಙಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸದಾನಂದಗೌಡ ವ್ಯಂಗ್ಯವಾಡಿದ್ದಾರೆ.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ವಿ.ಭೈರೇಗೌಡ ಪರ ಮತ ಯಾಚಿಸುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡಿ, ಜನಪರ ಯೋಜನೆಗಳು, ಕಾರ್ಯಕ್ರಮಗಳನ್ನು ಜಾರಿಗೆ ತಂದು ಮೆಚ್ಚುಗೆ ಪಡೆಯಿತು. ಆದರೆ, ಅಧಿಕಾರಕ್ಕಾಗಿ ಕಚ್ಚಾಟ, ಭಿನ್ನಾಭಿಪ್ರಾಯಗಳಿಂದ ಕೆಲ ಸಣ್ಣಪುಟ್ಟ ತಪ್ಪುಗಳು ನಡೆದವು ಎಂದು ಒಪ್ಪಿಕೊಂಡರು.
ಬಿಜೆಪಿಯಲ್ಲಿ ಕೆಲ ಗೊಂದಲಗಳಿಗೆ ಕಾರಣವಾಗಿದ್ದವರು ಪಕ್ಷ ಬಿಟ್ಟು ಹೊರ ನಡೆದಿರುವುದರಿಂದ ಬಿಜೆಪಿ ಸ್ವಚ್ಛವಾಗಿದೆ ಈ ನಿಟ್ಟಿನಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವಲ್ಲಿ ಯಾವುದೇ ಅಡ್ಡಿ ಇಲ್ಲ ಮತದಾರರಲ್ಲಿ ಮನವಿ ಮಾಡಿದರು.
ಬಿಜೆಪಿ ಅಭ್ಯರ್ಥಿ ಎ.ವಿ.ಭೈರೇಗೌಡ, ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಡಾ.ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

