'ಭ್ರಷ್ಟಾಚಾರದಲ್ಲೇ ತೇಲಾಡಿದ ಬಿಜೆಪಿ'
ಕ.ಪ್ರ.ವಾರ್ತೆ ಚಿಕ್ಕಬಳ್ಳಾಪುರ ಏ.30-
ತಮ್ಮ ಸ್ವಾರ್ಥಕ್ಕಾಗಿ ರಾಜ್ಯದಲ್ಲಿ ಆಗಾಗ ಪವಿತ್ರ ಮತ್ತು ಅಪವಿತ್ರ ಮೈತ್ರಿಗಳನ್ನು ಮಾಡಿಕೊಳ್ಳುವ ಜೆಡಿಎಸ್ ಪಕ್ಷ ಸಂಪೂರ್ಣ ಬಹುಮತ ಪಡೆದು ಸ್ವತಂತ್ರವಾಗಿ ಅಧಿಕಾರ ನಡೆಸಲು ಸಾಧ್ಯವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹೇಳಿದರು.
ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುಧಾಕರ್ ಪರ ಮಂಗಳವಾರ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೆಡಿಎಸ್ ಮುಂದಿನ ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರ ಪಡೆಯುವ, ದೇವೇಗೌಡರ ಮಗ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವ ಮಾತು ಹೇಳುತ್ತಿದ್ದಾರೆ. ಆದರೆ,ಇದು ಸಾಧ್ಯವೇ ಎಂಬ ಪ್ರಶ್ನೆಗೆ ಖಂಡಿತ ಇಲ್ಲ ಎನ್ನುವುದೇ ನನ್ನ ಉತ್ತರವಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

