ಉಪವಿಭಾಗಾಧಿಕಾರಿಗಳ ಕಚೇರಿ ವರ್ಗಾವಣೆಗೆ ಆಗ್ರಹ
ಕ.ಪ್ರ.ವಾರ್ತೆ ದೊಡ್ಡಬಳ್ಳಾಪುರ ಆ. 1
ಬೆಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯನ್ನು ಕೂಡಲೇ ದೊಡ್ಡಬಳ್ಳಾಪುರಕ್ಕೆ ವರ್ಗಾಯಿಸಬೇಕು ಎಂದು ಆಗ್ರಹಿಸಿ ಇಲ್ಲಿನ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೆಂಗಳೂರಿನ ಪೋಡಿಯಂ ಬ್ಲಾಕ್ನಲ್ಲಿರುವ ಉಪವಿಭಾಗಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹಕ್ಕೊತ್ತಾಯದ ಪ್ರದರ್ಶನ ನಡೆಸಲಾಯಿತು.
ನಂತರ ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಇಡೀ ರಾಜ್ಯದಲ್ಲಿರುವ 70ಕ್ಕೂ ಹೆಚ್ಚು ಉಪವಿಭಾಗಾಧಿಕಾರಿಗಳ ಕಚೇರಿಗಳು ಆಯಾ ಉಪವಿಭಾಗ ಕೇಂದ್ರಗಳಲ್ಲೇ ಇವೆ. ಆದರೆ 1956ರಲ್ಲೇ ಉಪವಿಭಾಗವಾಗಿ ಅಸ್ತಿತ್ವಕ್ಕೆ ಬಂದ ದೊಡ್ಡಬಳ್ಳಾಪುರ ಉಪವಿಭಾಗ ಕಚೇರಿ ಮಾತ್ರ ಈಗಲೂ ಬೆಂಗಳೂರು ನಗರದಲ್ಲೇ ಕಾರ್ಯನಿರ್ವಹಿಸುತ್ತಿದೆ. ಇದು ಅತ್ಯಂತ ಅವೈಜ್ಞಾನಿಕ. ರೈತರು, ಸಾರ್ವಜನಿಕರು ಸಣ್ಣಪುಟ್ಟ ಕೆಲಸಗಳಿಗೂ ಬೆಂಗಳೂರಿಗೇ ಬರಬೇಕಾದ ಅನಿವಾರ್ಯತೆ ಇದೆ. ದೂರದ ಗ್ರಾಮೀಣ ಪ್ರದೇಶದ ಜನರು ಭೂಮಿ, ಕಂದಾಯ ಸೇರಿದಂತೆ ಸಿವಿಲ್ ವ್ಯಾಜ್ಯಗಳಿಗೆ ಉಪವಿಭಾಗದ ವ್ಯಾಪ್ತಿಯ ಹೊರಗೆ ಬರಲೇಬೇಕಾದ ಅನಿವಾರ್ಯತೆ ಇದೆ. ಅಲ್ಲದೆ ಜಿಲ್ಲಾ ವ್ಯಾಪ್ತಿಯಲ್ಲಿರುವ ಏಕೈಕ ಉಪವಿಭಾಗವೂ ಜಿಲ್ಲೆಯಿಂದ ಹೊರಗಿರುವುದು ಖಂಡನೀಯ. ದೊಡ್ಡಬಳ್ಳಾಪುರ ಉಪವಿಭಾಗ ಈ ಕೂಡಲೇ ದೊಡ್ಡಬಳ್ಳಾಪುರದಲ್ಲಿ ಕಚೇರಿ ಆರಂಭಿಸಬೇಕು. ಉಪವಿಭಾಗಾಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಳದಲ್ಲೇ ಕಾರ್ಯನಿರ್ವಹಿಸಬೇಕು ಎಂಬುದು ಎಲ್ಲ ಜನರ ಹಕ್ಕೊತ್ತಾಯವಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

