ತಳಹಂತದಿಂದ ಮಡಿವಾಳರ ಸಂಘಟನೆ ಅಗತ್ಯ: ಆವತಿ ನಂಜಪ್ಪ
ದೊಡ್ಡಬಳ್ಳಾಪುರ: ಮಡಿವಾಳ ಸಮುದಾಯಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಇನ್ನೂ ಮರೀಚಿಕೆಯಾಗಿದೆ. ಈ ನಿಟ್ಟಿನಲ್ಲಿ ಮಡಿವಾಳರು ತಾಲೂಕು ಹಂತಗಳಲ್ಲಿ ಸಂಘಟಿತರಾಗಬೇಕು ಎಂದು ರಾಜ್ಯ ಮಡಿವಾಳ ಮಾಚಿದೇವರ ಸಂಘದ ಅಧ್ಯಕ್ಷ ಆವತಿ ನಂಜಪ್ಪ ಹೇಳಿದರು.
ಇಲ್ಲಿನ ಬಸವೇಶ್ವರ ಸಮುದಾಯ ಭವನದಲ್ಲಿ ನಡೆದ ಸಂಘಟನೆಯ ತಾಲೂಕು ಸಂಘದ ಪೂರ್ವಭಾವಿ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಂಘದ ನೇತೃತ್ವದಲ್ಲಿ ರಾಜ್ಯ ಮಟ್ಟದಲ್ಲಿ ಸಮಾವೇಶ ನಡೆಸಲು ಸಿದ್ಧತೆ ನಡೆಯುತ್ತಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ಬಹುತೇಕ ತಾಲೂಕುಗಳಲ್ಲಿ ಈಗಾಗಲೇ ಪೂರ್ವ ಸಿದ್ಧತೆಗಳು ನಡೆದಿವೆ. ಸಮಾವೇಶದಲ್ಲಿ ಕೈಗೊಳ್ಳಬೇಕಾದ ನಿರ್ಣಯಗಳು, ಮಡಿವಾಳ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಮಾಹಿತಿ ಸಂಗ್ರಹಣೆ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಸಾನ್ನಿಧ್ಯ ವಹಿಸಿದ್ದ ಮಾಚಿದೇವ ಶಿವಯೋಗಾನಂದ ಸ್ವಾಮೀಜಿ, ಶೈಕ್ಷಣಿಕವಾಗಿ ಮಡಿವಾಳ ಸಮಾಜವನ್ನು ಬಲಗೊಳಿಸಬೇಕಿದೆ. ರಾಜ್ಯದಲ್ಲಿ ಮಡಿವಾಳರು ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕವಾಗಿ ಸದೃಢರಾಗಬೇಕು. ಇದಕ್ಕೆ ಎಲ್ಲ ಹಂತದಲ್ಲೂ ಪ್ರೋತ್ಸಾಹ ಸಿಗಬೇಕಿದೆ ಎಂದರು.
ತಾಲೂಕು ಸಂಘದ ಅಧ್ಯಕ್ಷ ಜಿ.ರಂಗಸ್ವಾಮಿ, ಗೌ.ಅಧ್ಯಕ್ಷ ರಾಜಣ್ಣ, ಉಪಾಧ್ಯಕ್ಷ ಪುಟ್ಟಯ್ಯ, ಮಾಜಿ ಅಧ್ಯಕ್ಷ ಜಿ.ಡಿ.ಗೋಪಾಲ್, ಗುರುಪೀಠದ ಎಚ್.ಸಿ.ರುದ್ರಪ್ಪ, ದೋಬಿ ಘಾಟ್ ರಾಜ್ಯಾಧ್ಯಕ್ಷ ಕರಿಯಪ್ಪ, ಮಹಿಳಾ ಸಂಘದ ಯೋಗೇಶ್ವರಿ, ನರಸಮ್ಮ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

