ನಿರ್ಗತಿಕರ ಸೇವೆಯಿಂದ ಆತ್ಮತೃಪ್ತ್ತಿ ಪಡೆಯಿರಿ
ಹೊಸಕೋಟೆ: ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿರುವವರಿಗೆ ರೋಟರಿ ಸಂಸ್ಥೆಯ ಸದಸ್ಯರು ಸೌಲಭ್ಯಗಳನ್ನು ಕಲ್ಪಿಸುವುದರೊಂದಿಗೆ ಆತ್ಮಸಂತೃಪ್ತಿ ಹೊಂದಬೇಕು ಎಂದು ಜಿಲ್ಲಾ ಗವರ್ನರ್ ಎಂ.ಮಂಜುನಾಥ ಶೆಟ್ಟಿ ಹೇಳಿದರು. ಪಟ್ಟಣದ ಜಿಇಎಫ್ ಕಣ್ಣಿನ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ರೋಟರಿ ಹೊಸಕೋಟೆ ಸೆಂಟ್ರಲ್ನ ನೂತನ ಅಧ್ಯಕ್ಷರ ಪದವಿ ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಸ್ವಂತ ಅವಶ್ಯಕತೆಗಳನ್ನು ಪೂರೈಸಿಕೊಂಡು ದುಡಿಮೆಯ ಸ್ವಲ್ಪ ಹಣವನ್ನು ಸಾಮಾಜಿಕ ಚಟುವಟಿಕೆಗಳಿಗೆ ವಿನಿಯೋಗಿಸುವ ಮನೋಭಾವ ಬೆಳೆಸಿಕೊಂಡಲ್ಲಿ ಮಾತ್ರ ಸಂಸ್ಥೆಯ ಧ್ಯೇಯೋದ್ದೇಶಗಳನ್ನು ಈಡೇರಿಸಬಹುದು ಎಂದರು. ಅಧ್ಯಕ್ಷ ಕೆ.ನಟರಾಜ್ ಮಾತನಾಡಿದರು. ನೂತನ ಅಧ್ಯಕ್ಷ ಬಚ್ಚಣ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ತಾಲೂಕಿನ ಆಯ್ದ 10 ಶಾಲೆಗಳಲ್ಲಿ ನೇತೃ ತಪಾಸಣೆ ಶಿಬಿರ, ದಂತ ಚಿಕಿತ್ಸೆ, ನೋಟ್ಪುಸ್ತಕ , ಲೇಖನಸಾಮಗ್ರಿ , ಕಂಪ್ಯೂಟರ್, ಡೆಸ್ಕ್ಗಳ ವಿತರಣೆ, ಪಶು ಆರೋಗ್ಯ ತಪಾಸಣೆ ನಡೆಸಲು ಉದ್ದೇಶಿಸಿದ್ದು ಸದಸ್ಯರು ಸಹಕರಿಸಬೇಕು ಎಂದು ಮನವಿ ಮಾಡಿದರು. ಅಸಿಸ್ಟೆಂಟ್ ಗೌರ್ನರ್ ಡಾ.ಪಿ.ಸಿ.ಪಿ.ಹರನ್ ಸಂಸ್ಥಾಪಕ ಅಧ್ಯಕ್ಷ ಎಚ್.ವಿ.ರಾಮಚಂದ್ರ, ನಿರ್ದೇಶಖ ಕೃಷ್ಟಪ್ಪ ಕಾರ್ಯದರ್ಶಿ ಕೆ.ರಮೇಶ್, ಶೋಭಾ ಉಪಸ್ಥಿತರಿದ್ದರು.
ಇಂದು ನಾಡಪ್ರಭು ಕೆಂಪೇಗೌಡ ಜಯಂತಿ
ನೆಲಮಂಗಲ: ಪಟ್ಟಣದ ಗೋಪಿವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಒಕ್ಕಲಿಗ ಸರ್ಕಾರಿ ನೌಕರರ ಸಂಘದ ವತಿಯಿಂದ ಆ. 4ರ ಭಾನುವಾರದಂದು ಬೆಳಿಗ್ಗೆ 10-30ಕ್ಕೆ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ ಮತ್ತು 2012-2013ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.75ಕ್ಕಿಂತ ಅಧಿಕ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಅಧಿಕ ಅಂಕಗಳನ್ನು ಪಡೆದ ಒಕ್ಕಲಿಗ ಜನಾಂಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ 2012-2013ನೇ ಸಾಲಿನಲ್ಲಿ ನಿವೃತ್ತರಾದ ಒಕ್ಕಲಿಗ ಜನಾಂಗದ ಸರ್ಕಾರಿ ನೌಕರರಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ಒಕ್ಕಲಿಗ ಸರ್ಕಾರಿ ನೌಕರರ ಸಂಘದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

