ಬೆಂಗಳೂರು ಗ್ರಾಮಾಂತರ

ಉಪವಿಭಾಗ ಕಚೇರಿ ಬಾರದ ಹೊರತು ಧ್ವಜಾರೋಹಣಕ್ಕೆ ಅವಕಾಶವೇ ಇಲ್ಲ

Published On :

ದೊಡ್ಡಬಳ್ಳಾಪುರ: ಬೆಂಗಳೂರಿನಲ್ಲಿರುವ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಗಳ ಕಚೇರಿ ದೊಡ್ಡಬಳ್ಳಾಪುರ ನಗರಕ್ಕೆ ವರ್ಗಾವಣೆಯಾಗದ ಹೊರತು ಬರುವ ಆ.15ರ ಸ್ವಾತಂತ್ರ್ಯೋತ್ಸವದಂದು ಉಪವಿಭಾಗಾಧಿಕಾರಿಗಳು ದೊಡ್ಡಬಳ್ಳಾಪುರದಲ್ಲಿ ಧ್ವಜಾರೋಹಣ ಮಾಡಲು ಅವಕಾಶ ಕೊಡುವುದಿಲ್ಲ ಎಂದು ವಿವಿಧ ಸಂಘಟನೆಗಳು ಒಕ್ಕೊರಲ ಹಕ್ಕೊತ್ತಾಯ ಮಂಡಿಸಿವೆ.
ಇಲ್ಲಿನ ತಾಲೂಕು ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಸಂಘಟನೆಗಳ ಪದಾಧಿಕಾರಿಗಳು ಸರ್ಕಾರದ ಮೇಲೆ ಈ ರೀತಿಯಾಗಿ ಒತ್ತಡ ಹೇರಿವೆ. ಎಸಿ ಕಚೇರಿ ದೊಡ್ಡಬಳ್ಳಾಪುರಕ್ಕೆ ಬಂದ ನಂತರ ಇಲ್ಲಿ ಉಪವಿಭಾಗಾಧಿಕಾರಿಗಳು ಧ್ವಜಾರೋಹಣ ಮಾಡಲಿ. ತಪ್ಪಿದಲ್ಲಿ ಈ ಬಾರಿ ಶಾಸಕರೇ ಧ್ವಜಾರೋಹಣ ಮಾಡಲಿ ಎಂದು ಆಗ್ರಹಿಸಿದ ಸಂಘಟನೆಗಳು ಇದೇ ಪೂರ್ವಭಾವಿಸಭೆಯ ನಿರ್ಣಯ ಎಂದು ಘೋಷಿಸಿದರು.
ಸ್ವಾತಂತ್ರ್ಯೋತ್ಸವಕ್ಕೆ ಅಡ್ಡಿಪಡಿಸುವುದು ನಮ್ಮ ಉದ್ದೇಶ ಅಲ್ಲ. ಆ.15ರೊಳಗೆ ಉಪವಿಭಾಗಾಧಿಕಾರಿಗಳ ಕಚೇರಿಯನ್ನು ದೊಡ್ಡಬಳ್ಳಾಪುರಕ್ಕೆ ತನ್ನಿ. ರಾಜ್ಯದ ಎಲ್ಲ ಉಪವಿಭಾಗಾಧಿಕಾರಿಗಳ ಕಚೇರಿಗಳೂ ಆಯಾ ಕೇಂದ್ರಗಳಲ್ಲೇ ಇರುವಾಗ ದೊಡ್ಡಬಳ್ಳಾಪುರಕ್ಕೆ ಮಾತ್ರ ಮಲತಾಯಿ ಧೋರಣೆ ಸರಿಯಲ್ಲ. ಕಳೆದ 57 ವರ್ಷಗಳಿಂದ ಸಮಸ್ಯೆ ಹೀಗೇ ಇದ್ದರೂ ಸರ್ಕಾರ ಈ ಬಗ್ಗೆ ಗಮನ ಹರಿಸಿಲ್ಲ. ಸರ್ಕಾರಿ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿಗಳು ಧ್ವಜಾರೋಹಣ ಮಾಡುವುದು ಶಿಷ್ಟಾಚಾರ ಎನ್ನುವಂತಾದರೆ, ಆಯಾ ಉಪವಿಭಾಗ ಕಚೇರಿ ಸಂಬಂಧಪಟ್ಟ ಪ್ರದೇಶದ ವ್ಯಾಪ್ತಿಯಲ್ಲಿರಬೇಕು ಎಂಬುದೂ ಶಿಷ್ಟಾಚಾರವಲ್ಲವೇ ಎಂದು ಪ್ರಶ್ನಿಸಿದರು. ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಈ ಕುರಿತು ತೀರ್ಮಾನಕ್ಕೆ ಬರಬೇಕಾಗುತ್ತದೆ. ಸಂಘಟನೆಗಳ ಆಗ್ರಹದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ವರದಿ ನೀಡಲಾಗುವುದು. ಹೀಗಾಗಿ ಕೆಲವೇ ದಿನಗಳಲ್ಲಿ ಮತ್ತೊಮ್ಮೆ ಸಭೆ ಸೇರಿ ಸ್ವಾತಂತ್ರ್ಯೋತ್ಸವ ಮತ್ತು ಸಂಘಟನೆಗಳ ಹಕ್ಕೊತ್ತಾಯದ ಕುರಿತು ಚರ್ಚೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ಶಾಸಕ ಟಿ.ವೆಂಕಟರಮಣಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.