ಬೆಂಗಳೂರು ಗ್ರಾಮಾಂತರ

ಕ್ಷೀರ ಭಾಗ್ಯ ಯೋಜನೆಗೆ ಚಾಲನೆ

Published On :


ನೆಲಮಂಗಲ: ರಾಜ್ಯ ಸರ್ಕಾರದ ಮಹತ್ತರ ಯೋಜನೆಯಾಗಿರುವ ಶಾಲಾ ಮಕ್ಕಳಿಗಾಗಿ ಹಾಲು ನೀಡುವ ಕ್ಷೀರ ಭಾಗ್ಯ ಯೋಜನೆಗೆ  ಪುರಸಭಾ ಸದಸ್ಯ ಎನ್.ಗಣೇಶ್ ಚಾಲನೆ ನೀಡಿದರು.  
ಅವರು ಸೋಮವಾರ  ಪಟ್ಟಣದ ಜ್ಞಾನವಾಹಿನಿ ವಿದ್ಯಾಕೇಂದ್ರ ಶಾಲೆಯಲ್ಲಿ  ಸರ್ಕಾರದ  ಜನಪ್ರಿಯ ಯೋಜನಯಿಂದ ಕ್ಷೀರ ಭಾಗ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ   ಸರ್ಕಾರಿ ಶಾಲೆಗಳಲ್ಲಿ ಸಾಮಾನ್ಯವಾಗಿ ಬಡವರು ಮತ್ತು ಮಧ್ಯಮ ವರ್ಗದ ಕುಟುಂಬದವರ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಅವರ ಆರೋಗ್ಯದಿಂದಿರಲು ಸರ್ಕಾರ ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದಿದೆ ಎಂದರು.
ಪ್ರತಿಯೊಬ್ಬರಿಗೂ 150 ಮಿಲಿ ಲೀಟರ್ ಹಾಲು ವಿತರಿಸಲಾಗುತ್ತದೆ. ಶಾಲೆಗಳಲ್ಲಿ ಹಾಲು ಶೇಖರಣೆ ಮಾಡುವ ಪಾತ್ರೆಗಳು ಶುಚಿಯಿಂದ ಇರಬೇಕು. ಇದರ ಬಗ್ಗೆ ಮುಖ್ಯ ಶಿಕ್ಷಕರು ಗಮನ ಕೊಡಬೇಕು ಎಂದು ಸಂಸ್ಥೆಯ ಕಾರ್ಯದರ್ಶಿ ಪ್ರಭಾಕರ್ ಹೇಳಿದರು.  ಪುರಸಭಾ ಸದಸ್ಯೆ ರಾಧಾಬಾಯಿ, ಮುಖ್ಯೋಪಾಧ್ಯಾಯ ಆರ್.ನಾಗರಾಜು, ಸಂಸ್ಥೆಯ ಗೌರವಾಧ್ಯಕ್ಷ ಸರ್ವೋತ್ತಮ್, ಶಿವಾಜಿರಾವ್ ಶಿಂಧೆ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.