ಜೆಡಿಎಸ್ನಿಂದ ಮತ್ತೆ ಕಾಂಗ್ರೆಸ್ಗೆ 17 ಮಂದಿ ಮುಖಂಡರು
ಚನ್ನಪಟ್ಟಣ: ಲೋಕಸಭಾ ಉಪಚುನಾವಣಾ ಅಖಾಡ ರಂಗೇರುತಿದ್ದು ಚುನಾವಣೆಯ ಹಿನ್ನೆಲೆಯಲ್ಲಿ ಬೊಂಬೆನಗರಿಯ ರಾಜಕೀಯ ಪಾಳಯದಲ್ಲಿ ಪಕ್ಷಾಂತರ ಆರಂಭಗೊಂಡಿದ್ದು ಕಳೆದ ಮೂರು ತಿಂಗಳ ಹಿಂದಷ್ಟೆ ಕಾಂಗ್ರೆಸ್ನಿಂದ ಜೆಡಿಎಸ್ಗೆ ಪಕ್ಷಾಂತರ ಗೊಂಡಿದ್ದ 17 ಮಂದಿ ಮುಖಂಡರು ಮಾತೃಪಕ್ಷಕ್ಕೆ ಮರಳಿದ್ದಾರೆ.
ಪಟ್ಟಣದ ಹೊರವಲಯದಲ್ಲಿರುವ ಖಾಸಗಿ ಹೋಟೆಲ್ನಲ್ಲಿ ತಾಲೂಕು ಕಾಂಗ್ರೆಸ್ ಆಯೋಜಿಸಿದ್ದ ಸುದ್ದಿ ಗೋಷ್ಠಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಮುಖಂಡರು ತಾಲೂಕು ಕಾಂಗ್ರೆಸ್ನಲ್ಲಿ ಸೂಕ್ತ ನಾಯಕತ್ವ ಇಲ್ಲ ಎಂದು ಜೆಡಿಎಸ್ಗೆ ಪಕ್ಷಾಂತರ ಗೊಂಡಿದ್ದೆವು. ಇದೀಗ ಡಿ.ಕೆ.ಶಿವಕುಮಾರ್ ನಾಯಕತ್ವ ವಹಿಸಿಕೊಳ್ಳುವುದಾಗಿ ತಿಳಿಸಿರುವುದರಿಂದ ನಾವು ಕಾಂಗ್ರೆಸ್ಗೆ ಹಿಂದಿರುಗಿರುವುದಾಗಿ ತಿಳಿಸಿದರು.
ಹೊಂದಾಣಿಕೆ ಇಲ್ಲ: ತಾಲೂಕಿನಲ್ಲಿ ಬದಲಾವಣೆ ತರಲು ಅನಿತಾಕುಮಾರಸ್ವಾಮಿ ಸೂಕ್ತ ಅಭ್ಯರ್ಥಿ ಎಂದು ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ನಾವು ಅವರನ್ನು ಬೆಂಬಲಿಸಿದ್ದೆವೇ ವಿನಾ ನಾವೇನು ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ಪಡೆದಿರಲಿಲ್ಲ. ಅಲ್ಲಿ ಪರಸ್ಪರ ಹೊಂದಾಣಿಕೆ ಇಲ್ಲದಿರುವುದನ್ನು ಮನಗಂಡು ಪಕ್ಷಾಂತರ ಮಾಡುತ್ತಿರುವುದಾಗಿ ಅವರು ತಿಳಿಸಿದರು.
ಅಭಿವೃದ್ಧಿಗಾಗಿ ಕಾಂಗ್ರೆಸ್ಗೆ: ಮುಂದಿನ 5 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವುದರಿಂದ ತಾಲೂಕಿನ ಅಭಿವೃದ್ಧಿಗೆ ಸಹಕಾರವಾಗಲಿದೆ ಎಂಬ ಕಾರಣಕ್ಕೆ ಮಾತೃಪಕ್ಷಕ್ಕೆ ಮರಳುತ್ತಿರುವುದಾಗಿ ತಿಳಿಸಿದರು.
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲವು ಸಾಧಿಸಲಿದ್ದು ತಾಲೂಕಿನಲ್ಲಿ ಪಕ್ಷದ ಅಭ್ಯರ್ಥಿಗೆ ಹೆಚ್ಚಿನ ಮತ ಕೊಡಿಸಲು ಶ್ರಮಿಸುವುದಾಗಿ ತಿಳಿಸಿದರು.
ಕುಕ್ಕುಟ ಮಹಾಮಂಡಲಿ ಮಾಜಿ ಅಧ್ಯಕ್ಷ ಡಿ.ಕೆ.ಕಾಂತರಾಜು, ತಾ.ಪಂ ಮಾಜಿ ಪ್ರಭಾರ ಅಧ್ಯಕ್ಷ ರಂಗನಾಥ್, ಮಾಜಿ ಪ್ರಧಾನ ಚಕ್ಕೆರೆ ರಾಜು, ಪಾಳ್ಯ ಮಹದೇವು, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ರಂಗಸ್ವಾಮಿ, ಕೂರಣಗೆರೆ ಗೋಪಾಲ್, ಚಕ್ಕೆರೆ ಗ್ರಾ.ಪಂ ಉಪಾಧ್ಯಕ್ಷ ಕೃಷ್ಣೇಗೌಡ ಸೇರಿದಂತೆ 17 ಮುಖಂಡರು ಕಾಂಗ್ರೆಸ್ಗೆ ಸೇರ್ಪಡೆ ಗೊಂಡರು.
ಸುದ್ದಿ ಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಸಿ.ವೀರೇಗೌಡ, ಮುಖಂಡ ಎಚ್.ಎಸ್. ಕಾಂತರಾಜು, ಜಿ.ಎಂ. ಸುರೇಶ್ ಗೌಡ, ನಾಗೇಂದ್ರ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

