ಬೆಂಗಳೂರು ಗ್ರಾಮಾಂತರ

ಗ್ರಾಮ ಪಂಚಾಯಿತಿ ಉಪಚುನಾವಣೆ ಫಲಿತಾಂಶ ಪ್ರಕಟ

Published On :

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೊಣ್ಣಪ್ಪನಹಳ್ಳಿ ಮತ್ತು ತಿಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಹಳ್ಳಿ ಗ್ರಾ.ಪಂ ಸ್ಧಾನಗಳಿಗೆ ಕಳೆದ ಭಾನುವಾರ ನಡೆದಿದ್ದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಕೊನಘಟ್ಟ ಗ್ರಾ.ಪಂ ವ್ಯಾಪ್ತಿಯ ಸೊಣ್ಣಪ್ಪನಹಳ್ಳಿ ಕ್ಷೇತ್ರದಿಂದ ಬಿ.ಮುನೇಗೌಡ ಬೆಂಬಲಿತ ಅಭ್ಯರ್ಥಿ ಮಂಜುನಾಥ್ 260 ಮತಗಳನ್ನು ಪಡೆದು ಗೆಲವು ಪಡೆದಿದ್ದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಲ್.ಎಚ್.ಮುನಿರಾಜು 247 ಮತಗಳನ್ನು ಪಡೆದು 13 ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ. ತಿಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಹಳ್ಳಿ ಕ್ಷೇತ್ರದಿಂದ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ರಾಜಮ್ಮ 449 ಮತಗಳನ್ನು ಪಡೆದು ಜಯಗಳಿಸಿದ್ದು, ಮುನೇಗೌಡ, ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಚ್.ರುದ್ರೇಗೌಡ 444 ಮತಗಳನ್ನು ಪಡೆದು 5 ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ.
ರೈತರಿಗೆ ತೊಂದರೆ ಆದರೆ ಕೆಎಂಎಫ್ ಸಹಾಯ ಹಸ್ತ
ನೆಲಮಂಗಲ: ಹೈನುಗಾರಿಕೆಯು ಹಳ್ಳಿ ಭಾಗದ ಜನರಿಗೆ ಆದಾಯದ ಪ್ರಮುಖ ಮೂಲವಾಗಿದೆ. ಅಂತಹ ಕಾರ್ಯಧಲ್ಲಿ ರಾಸುಗಳ ಅಕಾಲಿಕ ಮರಣದಿಂದ ರೈತರಿಗೆ ತೊಂದರೆ ಉಂಟಾಗುತ್ತದೆ. ಇದರಿಂದಾಗುವ ನಷ್ಟವನ್ನು ಬರಿಸಲು ಕೆ.ಎಂ.ಎಫ್ ಸಿದ್ಧವಿದೆ ಎಂದು ಕೆ.ಎಂ.ಎಫ್ ಮಂಡಳಿಯ ನಿರ್ದೇಶಕ ತಿಮ್ಮರಾಜು ತಿಳಿಸಿದರು. ಅವರು ಬುಧವಾರ ತಾಲೂಕಿನ ತ್ಯಾಮಗೊಂಡ್ಲು ಹೋಬಳಿ ಮಣ್ಣೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ  ಅಕಾಲಿಕ ಮರಣವನ್ನಪ್ಪಿದ ರಾಸುಗಳ ಪಾಲಕರಿಗೆ ಕೆ.ಎಮ್.ಎಫ್ ಇಲಾಖೆಯ ಅಧಿಕಾರಿಗಳು ಚೆಕ್ ಮೂಲಕ ಸಹಾಯ ಧನವನ್ನು ವಿತರಿಸಿ ಮಾತನಾಡುತ್ತಾ ಸಹಕಾರ ಸಂಘದಲ್ಲಿ ರೈತರಿಗೆ ಅನುಕೂಲವಾಗುವಂತೆ ಕಡಿಮೆ ಬೆಲೆಯಲ್ಲಿ ಪಶು ಆಹಾರ ನೀಡಲಾಗುತ್ತಿದೆ. ರೈತರು ಇದರ ಅನುಕೂಲವನ್ನು ಪಡೆದುಕೊಳ್ಳಬೇಕೆಂದರು. ನಾಗಮ್ಮ ಮತ್ತು ನೀಲಾಂಬಿಕೆ ಅವರಿಗೆ ತಲಾ 10 ಸಾವಿರ ಮೌಲ್ಯದ ಚೆಕ್ ವಿತರಿಸಿದರು.
ಎವರ್ ಗ್ರೀನ್ ಶಾಲೆರಾಜ್ಯ ಮಟ್ಟಕ್ಕೆ ಆಯ್ಕೆ
ವಿಜಯಪುರ: ಹೊಸಕೋಟೆಯಲ್ಲಿ 2013-14ನೇ ಸಾಲಿನಲ್ಲಿ ನಡೆದ ಸೈನ್ಸ ಇನ್ಸಪೈರ್ ಅವಾರ್ಡ್ ಕಾರ್ಯಕ್ರಮದಲ್ಲಿ ವಿಜಯಪುರದ ಎವರ್ ಗ್ರೀನ್ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 145 ಪ್ರೌಢಶಾಲೆಗಳು ಭಾಗವಹಿಸಿದ್ದು ಅದರಲ್ಲಿ 7 ಶಾಲೆಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.