ಬೆಂಗಳೂರು ಗ್ರಾಮಾಂತರ

ವರದಕ್ಷಿಣೆ ಕಿರುಕುಳ ಯುವತಿ ಆತ್ಮಹತ್ಯೆ

Published On :

ದೊಡ್ಡಬಳ್ಳಾಪುರ: ವರದಕ್ಷಿಣೆ ಕಿರುಕುಳದಿಂದ ಯುವತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ಶಿರವಾರ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟಿರುವ ಯುವತಿಯನ್ನು ಧನಲಕ್ಷ್ಮಿ(25) ಎಂದು ಗುರುತಿಸಲಾಗಿದೆ. ಈಕೆ ಶಿರವಾರ ಗ್ರಾಮದ ಚಿಕ್ಕಹನುಮಯ್ಯ ಎಂಬುವವರನ್ನು 6 ವರ್ಷಗಳ ಹಿಂದೆ ಮದುವೆಯಾಗಿದ್ದರು. ಅವರಿಗೆ ಮೂರೂವರೆ ವರ್ಷದ ಮಗಳಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಗಂಡ-ಹೆಂಡತಿ ಮಧ್ಯೆ ಮೂಡಿರುವ ವೈಮನಸ್ಯ ಘಟನೆಗೆ ಕಾರಣ ಎನ್ನಲಾಗಿದೆ. ಈ ಕುರಿತು ಧನಲಕ್ಷ್ಮಿ ತಾಯಿ ತಿಮ್ಮಕ್ಕ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನ್ನ ಮಗಳಿಗೆ ವರದಕ್ಷಿಣೆ ವಿಚಾರಕ್ಕಾಗಿ ಕಿರುಕುಳ ನೀಡಿದ್ದ ಪರಿಣಾಮವೇ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಇಬ್ಬರ ಬಂಧನ: ಘಟನೆಗೆ ಸಂಬಂಧಿಸಿದಂತೆ ಮೃತಳ ಗಂಡ ಚಿಕ್ಕಹನುಮಯ್ಯ ಮತ್ತು ಆತನ ತಂದೆ ಕೋಡಿಯಪ್ಪ ಎಂಬುವವರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಘಟನೆ ಸ್ಥಳಕ್ಕೆ ದೊಡ್‌ಡಬಳ್ಳಾಪುರ ತಹಶೀಲ್ದಾರ್ ಚಂದ್ರ, ಪೊಲೀಸ್ ಅಧಿಕಾರಿಗಳಾದ ಶಿವಾರೆಡ್ಡಿ, ಶಬರೀಶ್ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.