ದೈಹಿಕ, ಮಾನಸಿಕ ಸದೃಢತೆಗೆ ಕ್ಷೀರಭಾಗ್ಯ ಯೋಜನೆ ಸಹಕಾರಿ
ರಾಮನಗರ: ಶಾಲಾ ಮಕ್ಕಳ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ಷೀರಭಾಗ್ಯ ಯೋಜನೆ ಸಹಕಾರಿಯಾಗಿದೆ ಎಂದು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮುರಳೀಧರ ಅಭಿಪ್ರಾಯಪಟ್ಟರು.
ನಗರದ ಭಾರತೀಯ ಸಂಸ್ಕೃತಿ ವಿದ್ಯಾಪೀಠ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಹಾಲು ವಿತರಿಸಿ ಮಾತನಾಡಿದ ಅವರು, ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗೆ ಹಾಲು ವಿತರಣಾ ಯೋಜನೆ ರೂಪಿಸಿದೆ. ಶಾಲಾ ಮಕ್ಕಳು ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು. ದೈಹಿಕ ದುರ್ಬಲತೆಯು ಅಧ್ಯಯನಕ್ಕೆ ಅಡ್ಡಿಪಡಿಸುತ್ತದೆ. ಹಾಲು ಕುಡಿಯುವುದರಿಂದ ದೈಹಿಕ ಸಬಲತೆ ಸಾಧ್ಯ. ಇಂದಿನ ಸ್ಫರ್ಧಾ ಜಗತ್ತಿನಲ್ಲಿ ಮೊದಲಿಗರಾಗಬೇಕಾದರೆ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳುವುದು ಅತ್ಯವಶ್ಯ. ಈ ದಿಶೆಯಲ್ಲಿ ಕ್ಷೀರಭಾಗ್ಯ ಯೋಜನೆ ಸಹಕಾರಿ ಎಂದರು. ಪಂಚಾಮೃತಗಳಲ್ಲಿ ಹಾಲು ಅತ್ಯಂತ ಶ್ರೇಷ್ಠವಾದುದು. ಹಾಲು ಕುಡಿಯುವದರಿಂದ ಆರೋಗ್ಯ ಹಾಗೂ ಆಯುಷ್ಯಗಳೆರಡು ವೃದ್ಧಿಸುತ್ತವೆ. ಶಾಲಾ ಮಕ್ಕಳಿಗೆ ಇದೊಂದು ವರದಾನವಾಗಿದೆ ಎಂದು ಮುಖ್ಯೋಪಾಧ್ಯಾಯ ಎಸ್.ಪಿ.ಹೂದ್ಲೂರ್ ಹೇಳಿದರು.
ಹಾಲಿನಲ್ಲಿ ಗುಣಮಟ್ಟ ಇಲ್ಲದಿದ್ದರೆ ಹಾಗೂ ಹಾಲು ಕುಡಿದಬಳಿಕ ಆರೋಗ್ಯದಲ್ಲಿ ಏರುಪೇರಾದರೆ ತಕ್ಷಣ ಶಿಕ್ಷಕರ ಗಮನಕ್ಕೆ ತರಬೇಕು. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸಲು ಹಾಗೂ ಎಲ್ಲಾ ಮಕ್ಕಳ ಸಾಮರ್ಥ್ಯ ಸಮನಾಗಿರಲಿ ಎಂಬುದು ಈ ಯೋಜನೆಯ ಉದ್ದೇಶವಾಗಿದೆ ಎಂದರು.
ಪ್ರಾಂಶುಪಾಲ ಬಿ.ಗೋಪಾಲ್, ಶಿಕ್ಷಕರಾದ ಜಿ.ಶಿವಣ್ಣ, ಷಡಕ್ಷರದೇವ, ಸುಕನ್ಯಾ, ಪಿ.ವಿ.ಅನಿತಾ, ಮಹದೇವ್, ಹಾಲೇಶ್, ರಾಘವೇಂದ್ರ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

