ಗ್ರಾಮದ ಸಮಸ್ಯೆ ಬಗ್ಗೆ ಪಂಚಾಯ್ತಿಗೆ ದೂರು ನೀಡಿದರೂ ಪ್ರಯೋಜನವಿಲ್ಲ: ಆರೋಪ
ನೆಲಮಂಗಲ: ತಾಲೂಕಿನ ತ್ಯಾಮಗೊಂಡ್ಲು ಸೋಮಸಾಗರ ಗ್ರಾಮದಲ್ಲಿನ ಸಮಸ್ಯೆ ಬಗ್ಗೆ ಪಂಚಾಯ್ತಿಗೆ ದೂರು ನೀಡಿದರು ಯಾವುದೇ ಪ್ರಯೋಜನ ಆಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಅವರು ಗುರುವಾರ ಚರಂಡಿ ವ್ಯವಸ್ಥೆ ಸರಿಯಿಲ್ಲ, ನೀರಿನ ಟ್ಯಾಂಕ್ ಸ್ವಚ್ಛಗೊಳಿಸುತ್ತಿಲ್ಲ. ಟ್ಯಾಂಕಿನ ಸುತ್ತಲೂ ಹುಲ್ಲು ಬೆಳೆದಿದೆ ಮತ್ತು ನೀರು ಹರಿದು ಮುಂದೆ ಹೋಗದೆ ಟ್ಯಾಂಕ್ನ ಬಳಿಯೆ ನಿಂತು ಸೊಳ್ಳೆಗಳಿಗೆ ಆಶ್ರಯ ನೀಡುತ್ತಿದೆ. ಚರಂಡಿಗಳಲ್ಲಿ ಕಲುಷಿತ ನೀರು ಸಂಗ್ರಹವಾಗುವುದರಿಂದ ದುರ್ವಾಸನೆ ಹೆಚ್ಚಾಗಿದೆ. ಮುಖ್ಯವಾಗಿ ಸೊಳ್ಳೆಗಳು ವಿಪರೀತವಾಗಿರುವುದರಿಂದ ಗ್ರಾಮದಲ್ಲಿ ಡೆಂಘೀ ಮತ್ತು ಮಲೇರಿಯಾ ರೋಗದಿಂದ ನರಳುತ್ತಿದ್ದಾರೆ. ಇವರ ಪೈಕಿ ಶಾಲಾ ಮಕ್ಕಳೆ ಹೆಚ್ಚಾಗಿದ್ದಾರೆ. ಈ ರೋಗದಿಂದ ಶಾಲೆಯಲ್ಲಿ ಮಕ್ಕಳ ಹಾಜರಿ ಕೂಡ ಕಡಿಮೆಯಾಗಿದೆ ಎನ್ನುತ್ತಾರೆ ಇಲ್ಲಿಯ ಶಾಲಾ ಶಿಕ್ಷಕರು. ಇಷ್ಟೆಲ್ಲಾ ಸಮಸ್ಯೆ ಇದ್ದರೂ ಗ್ರಾಮ ಪಂಚಾಯ್ತಿ ಮತ್ತು ಆರೋಗ್ಯ ಇಲಾಖೆ ಕಿಂಚಿತ್ತು ತಲೆ ಕೆಡಿಸಿಕೊಂಡಿಲ್ಲ ಎಂದು ಗ್ರಾಮದ ರಂಗಯ್ಯ ಆರೋಪಿಸುತ್ತಿದ್ದಾರೆ.
ಗ್ರಾಮದಲ್ಲಿ 2 ಮುಖ್ಯ ರಸ್ತೆಗೆ ಸಿಮೆಂಟ್ ರಸ್ತೆ ಮಾಡಲಾಗಿದೆ ಆದರೂ ರಸ್ತೆಯ ಬದಿಯ ಚರಂಡಿಗಳಲ್ಲಿ ನೀರು ಸರಾಗವಾಗಿ ಮುಂದೆ ಹೋಗದೆ ನಿಲ್ಲುತ್ತಿದೆ. ಇದರಿಂದ ದುರ್ವಾಸನೆ ಹೆಚ್ಚಾಗಿದೆ. ಈಗಲಾದರೂ ಗ್ರಾಮ ಪಂಚಾಯ್ತಿ ಸದಸ್ಯರು ಮತ್ತು ಅಧಿಕಾರಿಗಳು ಇತ್ತ ಗಮನ ಹರಿಸಿ ಗ್ರಾಮದಲ್ಲಿ ಮೂಲಭೂತ ಸೌಲಭ್ಯದ ಕಡೆ ಗಮನ ಹರಿಸಿ ಅನುಕೂಲ ಕಲ್ಪಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.
ಮಿನಿ ವಾಟರ್ ವ್ಯವಸ್ಥೆ ಇದ್ದರೂ ಸಮರ್ಪಕ ನೀರಿನ ವ್ಯವಸ್ಥೆ ಇಲ್ಲ. ಗ್ರಾಮದಲ್ಲಿ 50 ಮನೆ ಇದ್ದರೂ ಒಂದೆ ಕೊಳವೆ ಬಾವಿ ಈಗ ಅದು ಸಹ ಬತ್ತಿಹೋಗಿದೆ. ನೀರಿಗೆ ತೊಂದರೆ ಇದ್ದರೂ ಬದಲಿ ವ್ಯವಸ್ಥೆ ಮಾಡುತ್ತಿಲ್ಲ. ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳು ನಿರ್ಲಕ್ಷ ವಹಿಸದೆ ತಕ್ಷಣವೇ ಸಮಸ್ಯೆ ಪರಿಹರಿಸಲು ಮುಂದಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

