ಬಾಲಕನ ಆರೋಗ್ಯ ವಿಚಾರಿಸಿದ ಸಚಿವ ಖಾದರ್
ಕ.ಪ್ರ.ವಾರ್ತೆ ರಾಮನಗರ ಆ.9
ಹುಚ್ಚುನಾಯಿ ಕಡಿತದಿಂದ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಬಾಲಕನ ಆರೋಗ್ಯವನ್ನು ಆರೋಗ್ಯ ಸಚಿವ ಯು.ಟಿ.ಖಾದರ್ ಶುಕ್ರವಾರ ವಿಚಾರಿಸಿದರು.
ಜಿಲ್ಲಾಸ್ಪತ್ರೆಯ ಮೂಲಭೂತ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ ಸಚಿವರಿಗೆ ರೋಗಿಗಳು ಸಮಸ್ಯೆಗಳ ಸುರಿಮಳೆಗೈದರು. ಈ ವೇಳೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ್ದನ್ನು ಕಂಡು ಆರೋಗ್ರು ಸಚಿವ ಕೆಂಡಾಮಂಡಲವಾದರು. ಜಿಲ್ಲಾ ಶಸ್ತ್ರ ಚಿಕಿತ್ಸಕ ವಿಜಯನರಸಿಂಹ ಅವರನ್ನು ಫೋನ್ ಮೂಲಕ ಸಂಪರ್ಕಿಸಿ ತೀವ್ರ ತರಾಟೆಗೆ ತೆಗೆದುಕೊಂಡರು.
ಆಸ್ಪತ್ರೆಯಲ್ಲಿ ಕಳೆದ 2 ವರ್ಷದಿಂದ ಸ್ಕ್ಯಾನಿಂಗ್ ಯಂತ್ರ ಕಾರ್ಯ ನಿರ್ವಹಿಸುತ್ತಿಲ್ಲ, ಎಕ್ಸರೇ ಯೂನಿಟ್ ಹಾಗೂ ಸ್ವಚ್ಛತೆ ಇಲ್ಲದ್ದನ್ನು ಕಂಡ ಸಚಿವರು ಈ ಎಲ್ಲಾ ಸೌಲಭ್ಯಗಳನ್ನು ಕೂಡಲೇ ಒದಗಿಸುವಂತೆ ಸೂಚಿಸಿ, ಆ.13ರೊಳಗೆ ವರದಿ ನೀಡುವಂತೆ ಜಿಲ್ಲಾ ಸರ್ಜನ್ಗೆ ತಾಕೀತು ಮಾಡಿದರು.
ಪ್ರಸೂತಿ ತಜ್ಞೆ ಡಾ. ಉಷಾ ಅವರು ಹೆರಿಗೆಗೆ ಬಂದವರಿಂದ ಬಲವಂತವಾಗಿ ಹಣ ವಸೂಲಿ ಮಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಾಗಿದ್ದರೂ ಇಲ್ಲಿ ಹಣ ನೀಡದಿದ್ದರೆ ಯಾವುದೇ ಚಿಕಿತ್ಸೆ ನೀಡುವುದಿಲ್ಲ. ಬಡವರಾದ ನಾವು ಹಣ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಸಚಿವರ ಬಳಿ ಹಲವರು ಅವಲತ್ತುಕೊಂಡರು.
ತಕ್ಷಣ ಡಾ.ಉಷಾ ಅವರಿಗೆ ಫೋನ್ ಮೂಲಕ ಸಂಪರ್ಕಿಸಿದ ಸಚಿವ ಯು.ಟಿ.ಖಾದರ್ ಅವರು, ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ.
ಇದನ್ನು ನೀವು ಕೊನೆ ಎಚ್ಚರಿಕೆ ಎಂದು ತಿಳಿದುಕೊಂಡು, ಸರಿಯಾದ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ನಿಜಾಂ ಪಾಷ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

