ಬೆಂಗಳೂರು ಗ್ರಾಮಾಂತರ

ಜಿಲ್ಲಾ ಹೋರಾಟ: ಸಭೆ ಇಂದು

Published On :

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೇಂದ್ರವನ್ನಾಗಿ ಘೋಷಿಸಬೇಕು ಎಂಬ ಒತ್ತಾಯ ದಿನೇ ದಿನೇ ತೀವ್ರವಾಗುತ್ತಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಿಎಂ ಸೇರಿದಂತೆ ಆಡಳಿತದ ವಿವಿಧ ಹಂತಗಳಲ್ಲಿ ಪ್ರಬಲ ಒತ್ತಾಯ, ನ್ಯಾಯಯುತ ಬೇಡಿಕೆಯ ಈಡೇರಿಕೆಗೆ ಆಗ್ರಹ ಮಾಡಲಾಗಿದೆ.
ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಘೋಷಣೆಗೆ ಆಗ್ರಹಿಸಿ ಎಲ್ಲ ಬಗೆಯ ಸಂಘಟನೆಗಳು, ಗಣ್ಯರು, ರಾಜಕೀಯ ಪಕ್ಷಗಳು, ಮುಖಂಡರು, ಜನಪ್ರತಿನಿಧಿಗಳ ವೇದಿಕೆ ಹೋರಾಟಕ್ಕೆ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಹೋರಾಟವನ್ನು ವೈಜ್ಞಾನಿಕವಾಗಿ ಕೊಂಡೊಯ್ಯಬೇಕು ಮತ್ತು ನ್ಯಾಯಯುತ ಬೇಡಿಕೆಯ ಬಗ್ಗೆ ಪ್ರತಿಯೊಬ್ಬ ನಾಗರಿಕರಲ್ಲೂ ಜಾಗೃತಿ ಮತ್ತು ಅರಿವು ಮೂಡಿಸುವ ಪ್ರಯತ್ನಗಳು ನಡೆಯಬೇಕಿದೆ.
ಈ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಹೋರಾಟವನ್ನು ಕೊಂಡೊಯ್ಯಲಾಗುತ್ತಿದೆ. ಈ ಹೋರಾಟಕ್ಕೆ ಈಗಾಗಲೇ ಇಲ್ಲಿನ ಎಲ್ಲ ರಾಜಕಾರಣಿಗಳು, ಸಂಘಟನೆಗಳು ಬೆಂಬಲ ಸೂಚಿಸಿದ್ದು ಯಾವುದೇ ಬಗೆಯ ಚಳವಳಿಗೆ ಸಿದ್ಧ ಎನ್ನುವ ಸಂದೇಶ ರವಾನಿಸಿದ್ದಾರೆ.
ಇಂದು ಸಭೆ: ಜಿಲ್ಲಾ ಕೇಂದ್ರ ರಚನೆ ವಿಚಾರವಾಗಿ ಚರ್ಚಿಸಲು ಮತ್ತು ಮುಂದಿನ ಹೋರಾಟಗಳ ಕುರಿತ ನಿರ್ಣಯ ಕೈಗೊಳ್ಳುವ ಸಲುವಾಗಿ ಆ.10ರಂದು ಶನಿವಾರ ಮಧ್ಯಾಹ್ನ 3 ಗಂಟೆಗೆ ಇಲ್ಲಿನ ಕನ್ನಡ ಜಾಗೃತ ಭವನದಲ್ಲಿ ದೊಡ್‌ಡಬಳ್ಳಾಪುರ ಜಿಲ್ಲಾಕೇಂದ್ರ  ಹೋರಾಟ ಸಮಿತಿಯ ನೇತೃತ್ವದಲ್ಲಿ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಸಭೆ ಕರೆಯಲಾಗಿದೆ.
ಈ ಸಭೆಗೆ ತಾಲೂಕಿನ ಎಲ್ಲ ಕನ್ನಡಪರ, ಪ್ರಗತಿಪರ, ರೈತಪರ, ಮಹಿಳಾ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು, ಕಾರ್ಮಿಕ ಸಂಘಟನೆಗಳೂ ಸೇರಿದಂತೆ ಎಲ್ಲಾ ರೀತಿಯ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸುವಂತೆ ಮನವಿ ಮಾಡಲಾಗಿದೆ. ಮುಂದಿನ ಹಂತದಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಜನಪ್ರತಿನಿಧಿಗಳ ಸಭೆ ಕರೆಯಲು ನಿರ್ಧರಿಸಲಾಗಿದೆ ಎಂದು ಹೋರಾಟ ಸಮಿತಿ ಪ್ರಧಾನ ಸಂಚಾಲಕ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.