ಬೆಂಗಳೂರು ಗ್ರಾಮಾಂತರ

ಇಂದಿನ ರಾಜಕಾರಣ ಮರ್ಯಾದಸ್ಥರಿಗಲ್ಲ

Published On :

ಚನ್ನಪಟ್ಟಣ: ಇತ್ತೀಚಿನ ರಾಜಕೀಯ ಬೆಳವಣಿಗೆ ಗಮನಿಸಿದರೆ ಮರ್ಯಾದಸ್ಥರು ರಾಜಕಾರಣಕ್ಕೆ ಬರಲು ಅಂಜುವಂತಾಗಿದೆ ಎಂದು ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ವಿಷಾದಿಸಿದರು.
ಶನಿವಾರ ತಾಲೂಕಿನ ಕೆಲ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿ, ಕೆಲ ಶಕ್ತಿಗಳು ವಾಮಮಾರ್ಗದಿಂದ ಚುನಾವಣೆ ಎದುರಿಸಲು ಮುಂದಾಗುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಸಿ ಬಳಿಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಕೆಲ ಮಂದಿ ಅಕ್ರಮವಾಗಿ ಹಣ ಸಂಪಾದಿಸಿ ಚುನಾವಣೆಯಲ್ಲಿ ಖರ್ಚು ಮಾಡುತ್ತಿರುವುದರಿಂದ ಜನತೆಯಲ್ಲಿ ರಾಜಕಾರಣಿಗಳೆಲ್ಲ ಹೀಗೆಯೇ ಎಂಬ ತಪ್ಪು ಭಾವನೆ ಮೂಡಿದೆ. ಆದರೆ ಎಲ್ಲಾ ರಾಜಕಾರಣಿಗಳು ಅಕ್ರಮವಾಗಿ ಹಣ ಸಂಪಾದನೆ ಮಾಡಿಲ್ಲ ಎಂದರು.
ಗೊಂದಲದಿಂದ ಸೋತಿದ್ದೇನೆ: ಈ ತಾಲೂಕಿನ ಮತದಾರರು ನನ್ನನ್ನು ಎಂದೂ ಕೈಬಿಟ್ಟಿಲ್ಲ. ತಾಲೂಕಿನ ಜನತೆ ಮನೆಮಗಳೆಂದು ಅಭಿಮಾನ, ಅಕ್ಕರೆ ತೋರಿದ್ದಾರೆ. ಆದರೆ ನಾನು ಸೋತಿದ್ದು ನಮ್ಮ ಪಕ್ಷದೊಳಗಿನ ಗೊಂದಲದಿಂದ ಎಂದು ಅನಿತಾಕುಮಾರಸ್ವಾಮಿ ತಿಳಿಸಿದರು.
ಕ್ಷೇತ್ರ ಮರೆತಿಲ್ಲ: ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತಿದ್ದರೂ ಕ್ಷೇತ್ರ ಮರೆತಿಲ್ಲ, ನಾನು ಈ ಕ್ಷೇತ್ರದಲ್ಲಿ ಕೈಗೊಳ್ಳಬೇಕೆಂದಿದ್ದ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸುವ ಉದ್ದೇಶದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವುದಾಗಿ ತಿಳಿಸಿದರು.
ನಾನು ಈ ಕ್ಷೇತ್ರಕ್ಕೆ ಸ್ಪರ್ಧಿಸುವ ಮೊದಲು ಕುಮಾರಸ್ವಾಮಿ ಅವರ ಸಂಸದರ ನಿಧಿಯಿಂದ ಅನುದಾನ ತಂದು ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನೆರವೇರಿಸಿದ್ದು ಇವರನ್ನು ಮುಂದುವರೆಸುವುದಾಗಿ ತಿಳಿಸಿದರು.
ರಾಮನಗರ ಜಿಲ್ಲೆ ನಮ್ಮ ರಾಜಕೀಯ ಕರ್ಮಭೂಮಿಯಾಗಿದ್ದು ಇಲ್ಲಿ ಪಕ್ಷಕ್ಕೆ ಹಿನ್ನಡೆಯಾಗಬಾರದೆಂಬ ಕಾರಣಕ್ಕೆ ನಾನು ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಒಪ್ಪಿಕೊಂಡಿದ್ದು. ಕಾರ್ಯಕರ್ತರು ನನ್ನನ್ನು ಕೈಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ವಡ್ಡರಹಳ್ಳಿ ರಾಜಣ್ಣ, ಮುಖಂಡರಾದ ಬೋರ್‌ವೆಲ್ ರಾಮಚಂದ್ರು, ಯು.ಬಿ.ಚಂದ್ರು, ಜಿ.ಪಂ ಸದಸ್ಯರಾದ ರಘುಕುಮಾರ್, ರಮೇಶ್, ವಕೀಲಹನುಮಂತು ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.