ಚಕ್ಕೆರೆ ಶಿವಶಂಕರ್ಗೆ ಜಾನಪದ ರತ್ನ
ಮೈಸೂರು: ಮುಖ್ಯಪ್ರಾಣ ಸಾಂಸ್ಕೃತಿಕ ಅಕಾಡೆಮಿಯಿಂದ ಎಂ.ಎನ್. ಹೇಮಲತಾ ಸ್ಮರಣೆ ಅಂಗವಾಗಿ ನೀಡುವ ಜಾನಪದ ರತ್ನ ಪ್ರಶಸ್ತಿಯು ಜಾನಪದ ತಜ್ಞ ಚಕ್ಕೆರೆ ಶಿವಶಂಕರ್ ಅವರಿಗೆ ಸಂದಿದ್ದು, ಆ. 12 ರಂದು ಒಂಟಿಕೊಪ್ಪಲಿನ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಆವರಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಅಂದು ಮಧ್ಯಾಹ್ನ 10ಕ್ಕೆ ನಡೆಯುವ ಸಮಾರಂಭದಲ್ಲಿ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ನಾಡೋಜ ಡಾ. ದೇಜಗೌ ಉದ್ಘಾಟಿಸುವರು. ಶಾಸಕ ವಾಸು ಅವರು ಶಿವಶಂಕರ್ ಅವರಿಗೆ ಜಾನಪದ ರತ್ನ ಪ್ರಶಸ್ತಿ ಪ್ರದಾನ ಮಾಡುವರು. ಸಾಹಿತಿ ಡಾ. ಸಿಪಿಕೆ ಅಧ್ಯಕ್ಷತೆ ವಹಿಸುವರು. ಪಾಲಿಕೆ ಸದಸ್ಯರಾದ ಸಿ. ಮಹದೇಶ್, ಎಂ. ರಮೇಶ್, ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಗೌರವ ಕಾರ್ಯದರ್ಶಿ ಎಸ್. ಭರತೇಶ್ ಅತಿಥಿಗಳಾಗಿ ಭಾಗವಹಿಸುವರು ಎಂದು ಯುವ ಲೇಖಕಿ ಡಾ.ಎಂ. ಕನ್ನಿಕಾ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮೂಲತಃ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಜನಿಸಿದ ಶಿವಶಂಕರ್ ಓದಿದ್ದು ಚಕ್ಕೆರೆಯಲ್ಲಿ. ಚನ್ನಪಟ್ಟಣ ಹಾಗೂ ಬೆಂಗಳೂರು ವಿವಿಯಲ್ಲಿ ಪದವಿ ಗಳಿಸಿದರು. ಕನ್ನಡ ಎಂ.ಎ. ಸ್ನಾತಕೋತ್ತರ ಪಡೆದ ಶಿವಶಂಕರ್ ಡಾ. ದೇಜಗೌ ಮಾರ್ಗದರ್ಶನದ್ಲಲಿ ಪಿಎಚ್.ಡಿ ಪಡೆದು ನಂತರ ಜಾನಪದ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದರು.
ಮುಖ್ಯಪ್ರಾಣ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಎಂ.ಎನ್. ವಿಜಯ ವೆಂಕಟೇಶ್, ಅಧ್ಯಾಪಕ ಡಾ.ಟಿ.ಕೆ. ಕೆಂಪೇಗೌಡ, ಅನಸೂಯ ಕೆಂಪನಹಳ್ಳಿ, ಆಶಾ ಶಂಕರೇಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

