ದೇವಾಲಯದ ಹುಂಡಿ ಹಣ ದೋಚಿ ಪರಾರಿ
ಮಾಗಡಿ: ಬೀಗ ಮುರಿದು ಶ್ರೀ ಮಾದೇಶ್ವರಸ್ವಾಮಿ ದೇವಾಲಯದ ಹುಂಡಿ ಹಣವನ್ನು ಯಾರೋ ದರೋಡೆಕೋರರು ದೋಚಿ ಪರಾರಿಯಾಗಿದ್ದಾರೆ. ತಾಲೂಕಿನ ಮೋಟೆಗೌಡನಪಾಳ್ಯದಲ್ಲಿರುವ ಪೂರಾತನ ಶ್ರೀಮಹದೇಶ್ವರಸ್ವಾಮಿ ದೇವಾಲಯದ ಬೀಗ ಮುರಿದು, ಒಳನುಗ್ಗಿರುವ ಯಾರೋ ದರೋಡೆ ಕೋರರು ಹುಂಡಿ ಹೊಡೆದು ಅದರಲ್ಲಿದ್ದ ಅಂದಾಜು 10 ಸಾವಿರ ರು ಗಳನ್ನು ಕಳವು ಮಾಡಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಮಾಗಡಿ ಪೋಲೀಸ್ ಸಬ್ ಇನ್ಸ್ಪೆಕ್ಟರ್ ಧರ್ಮೇಗೌಡ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಗ್ರಾಮಸ್ಥರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಅರ್ಚಕ ದೇವರಾಜು. ತಾ.ಪಂ. ಸದಸ್ಯೆ ಅರುಂಧತಿ ಚಿಕ್ಕಣ್ಣ, ಗ್ರಾಮ ಪಂಚಾಯ್ತಿ ಸದಸ್ಯ ಶ್ರೀನಿವಾಸ್, ಶಂಕರ್, ರಾಮಣ್ಣ ಇತರರು ಹಾಜರಿದ್ದರು.
ಹಣ ಹಂಚಿಕೆ: ಜಗಳ ಕೊಲೆಯಲ್ಲಿ ಅಂತ್ಯ
ಬೆಂಗಳೂರು: ಹಣ ಹಂಚಿಕೆ ವಿಚಾರದಲ್ಲಿ ಎರಡು ಗುಂಪಿನ ನಡುವೆ ನಡೆದ ಜಗಳದಲ್ಲಿ ಯುವಕನನ್ನು ಇರಿದು ಹತ್ಯೆ ಮಾಡಿರುವ ಘಟನೆ ಇಂದಿರಾನಗರದ ಇಎಸ್ಐ ವಸತಿ ಗೃಹದ ಬಳಿ ಶನಿವಾರ ರಾತ್ರಿ ನಡೆದಿದೆ. ಇಂದಿರಾನಗರ ಅಪ್ಪಾರೆಡ್ಡಿ ಪಾಳ್ಯದ ನಿವಾಸಿ ಅಪ್ಪು (23) ಕೊಲೆಯಾದ ಯುವಕ. ಇತ್ತೀಚೆಗೆ ಅಲ್ಲಿನ ಯುವಕರ ಗುಂಪಿನ ನಡುವೆ ನಡೆದಿದ್ದ ಕ್ರಿಕೆಟ್ ಪಂದ್ಯದಲ್ಲಿ ಅಪ್ಪು ಅವರ ತಂಡ ಗೆಲವು ಸಾಧಿಸಿತ್ತು. ಶನಿವಾರ ರಾತ್ರಿ ಬಹುಮಾನವಾಗಿ ಬಂದಿದ್ದ ಹಣ ಹಂಚಿಕೆ ಮಾಡಿಕೊಳ್ಳುತ್ತಿದ್ದ ವೇಳೆ ಅಪ್ಪು ಹಾಗೂ ಅಭಿಷೇಕ್ ರೆಡ್ಡಿ ನಡುವೆ ಜಗಳವಾಗಿದೆ. ಈ ವೇಳೆ ಅಭಿಷೇಕ್ ವಿಕೆಟ್ನಿಂದ ಅಪ್ಪು ಹೊಟ್ಟೆಗೆ ಇರಿದಿದ್ದಾನೆ. ತಕ್ಷಣ ಗಾಯಾಳನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೆ ಅಪ್ಪು ಮೃತಪಟ್ಟಿದ್ದಾನೆ. ನಂತರ ಸ್ಥಳೀಯರು ಪೊಲೀಸರಿಗೆ ಮಾಹಿತಿನೀಡಿದರು. ಆರೋಪಿ ಅಭಿಷೇಕ್ ಪರಾರಿಯಾಗಿದ್ದಾನೆ.
ಚಾವಣಿ ಕುಸಿದು ಐವರಿಗೆ ಗಾಯ
ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಕಟ್ಟದ ಚಾವಣಿ ಕುಸಿದು ಐವರು ಕಾರ್ಮಿಕರು ಗಾಯಗೊಂಡಿರುವ ಘಟನೆ ಬಿಟಿಎಂ ಬಡಾವಣೆ 2ನೇ ಹಂತದ ರಿಂಗ್ ರಸ್ತೆ ಸಮೀಪದಲ್ಲಿ ಭಾನುವಾರ ನಡೆದಿದೆ. ಕೂಲಿಕಾರ್ಮಿಕರಾದ ರೆಹಮಾನ್(26), ಮಾರನ್(31) ಅವರ ಪರಿಸ್ಥಿತಿ ಗಂಭೀರವಾಗಿದೆ. ಉಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಕಾರ್ಮಿಕರು ಎಂದಿನಂತೆ ಭಾನುವಾರ ಬೆಳಗ್ಗೆ ಕೆಲಸದಲ್ಲಿ ನಿರತರಾಗಿದ್ದರು. ಎಲ್ಲರೂ 2ನೇ ಮಹಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಸುದ್ದಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಅವಶೇಷಗಳ ಅಡಿ ಸಿಲುಕಿದ್ದವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದರು. ಕಟ್ಟಡ ಮಾಲೀಕರ ವಿರುದ್ಧ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

