ಆತ್ಮರಕ್ಷಣೆ ಮಾಡಿಕೊಳ್ಳಲು ಬಂದೂಕು ತರಬೇತಿ
ಕ.ಪ್ರ.ವಾರ್ತೆ ರಾಮನಗರ ಆ.11-
ಜಿಲ್ಲಾ ಪೊಲೀಸ್ ಇಲಾಖೆಯು ಸಾರ್ವಜನಿಕರಿಗಾಗಿ ಆ.5ರಿಂದ 11ರವರೆಗೆ ಹಮ್ಮಿಕೊಂಡಿದ್ದ ನಾಗರಿಕ ಬಂದೂಕು ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಜಿಲ್ಲಾ ಪೊಲೀಸ್ ಭವನದಲ್ಲಿ ಭಾನುವಾರ ನಡೆಯಿತು.
ಶಿಬಿರದಲ್ಲಿ ಪಾಲ್ಗೊಂಡಿದ್ದ 70 ಮಂದಿ ಪ್ರಶಿಕ್ಷಣಾರ್ಥಿಗಳಿಗೆ ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗ್ರವಾಲ್ ತರಬೇತಿ ಪ್ರಮಾಣಪತ್ರವನ್ನು ವಿತರಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗ್ರವಾಲ್ ಮಾತನಾಡಿ, ನಾಗರಿಕರಲ್ಲಿ ಆತ್ಮರಕ್ಷಣೆ, ಶಿಸ್ತು, ಸಮಯಪಾಲನೆ ಹಾಗೂ ಕಾನೂನು ಪಾಲನೆಯ ಮಹತ್ವವನ್ನು ತಿಳಿಸಿಕೊಡುವ ಸದುದ್ದೇಶದಿಂದ ಈ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ ಎಂದರು.
ಪ್ರಕೃತಿ ವಿಕೋಪ ಹಾಗೂ ಇನ್ನಿತರೆ ತುರ್ತು ಸಂದರ್ಭಗಳಲ್ಲಿ ತರಬೇತಿ ಪಡೆದ ನಾಗರಿಕರನ್ನು ಪರಿಸ್ಥಿತಿಯನ್ನು ನಿಭಾಯಿಸಲು ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ ತಿಳಿಸಿದರು. ತರಬೇತಿ ನೀಡಿದ ಆರ್ಪಿಐ ಗಿರೀಶ್, ಮಲ್ಲಿಕಾರ್ಜುನಪ್ಪ, ಶಿವಶಂಕರ್, ಭರತ್ ಅವರನ್ನು ಇದೇ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳು ಅಭಿನಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

