ವಿದ್ಯಾವಂತರಾದರೆ ಬಡತನ ಅಂತ್ಯ
ನೆಲಮಂಗಲ: ಸಮಾಜದಲ್ಲಿ ಬಡತನ ನಿರ್ಮೂಲನೆಯಾಗಬೇಕಾದರೆ ಮಕ್ಕಳು ವಿದ್ಯಾವಂತರಾದಾಗ ಮಾತ್ರ ಸಾಧ್ಯವಾಗುತ್ತದೆ ಎಂದು ಟಿ.ಬೇಗೂರು ಜಿ.ಪಂ.ಸದಸ್ಯ ಬಿ.ಎಂ.ಎಲ್. ಕಾಂತರಾಜು ಹೇಳಿದರು. ಅವರು ಭಾನುವಾರ ತಾಲೂಕಿನ ಯಲಚಗೆರೆ ಗ್ರಾಮದಲ್ಲಿ ಶ್ರೀ ಮುನೇಶ್ವರಸ್ವಾಮಿ ವಾರ್ಷಿಕೋತ್ಸವ ಸಮಾರಂಭದಲ್ಲಿ ಸರ್ಕಾರಿ ಶಾಲೆಯ 150 ಜನ ವಿದ್ಯಾರ್ಥಿಗಳಿಗೆ ದಾನಿಗಳಾದ ಹೊಯ್ಸಳಸೇನೆ ಹನುಮಂತರಾಜು ನೀಡಿದ ಉಚಿತ ಸಮವಸ್ತ್ರ ವಿತರಿಸಿ ಮಾತನಾಡುತ್ತಾ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಮನೋಭಾವ ಮೂಡಿಸಿ ಕಲಿಕೆಯ ಆಸಕ್ತಿ ಹೆಚ್ಚಿಸುವ ಹೊಣೆಗಾರಿಕೆ ಪೋಷಕರು ಹಾಗೂ ಶಿಕ್ಷಕರ ಕರ್ತವ್ಯ ಎಂದು ತಿಳಿಸಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸರ್ಕಾರ ನೀಡುವ ಸೌಲಭ್ಯ ಸಮರ್ಪಕವಾಗಿ ಬಳಕೆಯಾದರೆ ವಿದ್ಯಾಭ್ಯಾಸ ಗುಣಮಟ್ಟ ಹೆಚ್ಚುವುದರೊಂದಿಗೆ ಉತ್ತಮ ಜೀವನ ನಿರ್ಮಾಣಕ್ಕೆ ತಳಪಾಯವಾಗುತ್ತದೆ ಎಂದು ಹೊಯ್ಸಳಸೇನೆ ರಾಜ್ಯಾಧ್ಯಕ್ಷ ಬಿ.ಎಸ್.ಕೃಷ್ಣಮೂರ್ತಿ ನುಡಿದರು. ಬಿ.ಡಿ.ಸಿ.ಸಿ. ಬ್ಯಾಂಕ್ ಮಾಜಿ ಜಿಲ್ಲಾಧ್ಯಕ್ಷ ಬಿ.ಎಸ್.ಕೃಷ್ಣಮೂರ್ತಿ, ಹೊಯ್ಸಳ ಸೇನೆ ಜಿಲ್ಲಾಧ್ಯಕ್ಷ ರಂಗಸ್ವಾಮಿ, ತಾಲ್ಲೂಕು ಅಧ್ಯಕ್ಷ ಹನುಮಂತರಾಜು, ಶಾಲಾ ಮುಖ್ಯ ಶಿಕ್ಷಕ ಬಸಣ್ಣ ಇದ್ದರು.
24, 25 ರಂದು ಕರಾಟೆ ಟೂರ್ನಿ
ಮೈಸೂರು: ಕನ್ ಇ ಮೆಬೋನಿ ಶಿಟೊರಿಯೊ ಕರಾಟೆ ಸ್ಕೂಲ್ ಆಫ್ ಇಂಡಿಯಾ ಹಾಗೂ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಆಫ್ ಮೈಸೂರು ಸಂಯುಕ್ತವಾಗಿ ಆ.24 ಮತ್ತು 25 ರಂದು ಎನ್ಐಇ ವಜ್ರ ಮಹೋತ್ಸವ ಒಳಾಂಗಣ ಕ್ರೀಡಾಂಗಣದಲ್ಲಿ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿ ಆಯೋಜಿಸಿದೆ. ಪಂದ್ಯಾವಳಿಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಮಹಾರಾಷ್ಟ್ರ, ಉತ್ತರಪ್ರದೇಶ, ಜಾರ್ಖಾಂಡ್, ಒರಿಸ್ಸಾ, ಬಿಹಾರ್, ಅಸ್ಸಾಂ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ್, ನವದೆಹಲಿ, ಪಂಜಾಬ್, ಪಾಂಡಿಚೇರಿ, ಗುಜರಾತ್, ರಾಜಸ್ತಾನ ರಾಜ್ಯಗಳಿಂದ 1 ಸಾವಿರ ಕರಾಟೆಪಟುಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಸಂಘದ ಕಾರ್ಯದರ್ಶಿ ಎನ್. ಶಂಕರ್ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆ.24ರ ಬೆಳಗ್ಗೆ 10.30ಕ್ಕೆ ಕಂದಾಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಪಂದ್ಯಾವಳಿ ಉದ್ಘಾಟಿಸುವರು.ಆ.23 ರಂದು ಸಂಜೆ ಕರಾಟೆ ಮಾಸ್ಟರ್ಗಳಿಗೆ ಪಂದ್ಯಾವಳಿ ನಡೆಸುವ ಬಗ್ಗೆ ತರಬೇತಿ ನೀಡಲಾಗುತ್ತದೆ ಎಂದು ಅವರು ಹೇಳಿದರು. ಎಂ. ರ್ಯಾಂಬೋ ಕಿರಣ್, ಗಣೇಶನ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

