ಸ್ವಾತಂತ್ರ್ಯ ದಿನಾಚರಣೆ: ಉಸ್ತುವಾರಿ ಸಚಿವರಿಗೆ ಆಹ್ವಾನ
ದೇವನಹಳ್ಳಿ: ಆ.15 ರಂದು ದೇವನಹಳ್ಳಿಯ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಾಡ ಹಬ್ಬಗಳ ಆಚರಣಾ ಸಮಿತಿಯವರು ಆಯೋಜಿಸಿರುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಭೈರೇಗೌಡ ಅವರನ್ನು ಹಾಗೂ ಇವರೊಂದಿಗೆ ಜಿಲ್ಲಾಧಿಕಾರಿಗಳನ್ನು ಮತ್ತು ಉಪವಿಭಾಗಾಧಿಕಾರಿಗಳನ್ನು ಪ್ರಥಮ ಬಾರಿಗೆ ಶಾಸಕರ ನೇತೃತ್ವದಲ್ಲಿ ಆಹ್ವಾನಿಸಲು ದೇವನಹಳ್ಳಿ ತಾಲೂಕು ಜಿಲ್ಲಾ ಹೋರಾಟ ಸಮಿತಿಯವರು ಭಾನುವಾರ ಒನಡೆದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆದ ಸಭೆಯಲ್ಲಿ ನಿರ್ಣಯ ಕೈಗೊಂಡರು.
ದೇವನಹಳ್ಳಿ ತಾಲೂಕು ಜಿಲ್ಲಾ ಕೇಂದ್ರವಾಗಲು ಎಲ್ಲ ರೀತಿಯ ಅರ್ಹತೆ ಪಡೆದಿದೆ ಎಂದು ಹೋರಾಟ ಸಮಿತಿಯ ಸಂಚಾಲಕರಾದ ಬಿ.ಕೆ.ಶಿವಪ್ಪರವರು ತಿಳಿಸಿ ಮುಖ್ಯವಾಗಿ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಇರುವುದು, ಬೆಂಗಳೂರಿನಿಂದ ದೇವನಹಳ್ಳಿಗೆ ಕೇವಲ 30 ನಿಮಿಷಗಳಲ್ಲಿ ತಲುಪಬಹುದಾಗಿದೆ. ಜಿಲ್ಲಾ ಮಟ್ಟದ ಎಲ್ಲ ಕಚೇರಿಗಳು ಕಾರ್ಯನಿರ್ವಹಿಸಲು ಅಗತ್ಯವಾದ ಸರ್ಕಾರಕ್ಕೆ ಸೇರಿದ ಸ್ಥಳಾವಕಾಶ ಇದೆ. ದೇವನಹಳ್ಳಿಯಲ್ಲಿ 22 ಕ್ಕೂ ಹೆಚ್ಚು ರಾಷ್ಟ್ರೀಕೃತ ಬ್ಯಾಂಕ್ಗಳಿದ್ದು ರಾಜ್ಯದ ಯಾವುದೇ ಜಿಲ್ಲಾ ಕೇಂದ್ರಗಳಲ್ಲಿ ಇಷ್ಟೊಂದು ಬ್ಯಾಂಕ್ಗಳಿಲ್ಲ ಎಂದರು.
ಜಿಲ್ಲಾ ಕೇಂದ್ರವಾಗಲು ಸೂಕ್ತ: ದೇವನಹಳ್ಳಿಯಲ್ಲಿರುವ ಪ್ರಾದೇಶಿಕ ಸಾರಿಗೆ ಇಲಾಖೆ, ನೋಂದಣಿ ಕಚೇರಿ, ಅಲ್ಲದೆ ಅಬಕಾರಿ ಇಲಾಖೆ, ವಾಣಿಜ್ಯ ತೆರಿಗೆ ಇಲಾಖೆಗಳಿಂದ ಪ್ರತಿ ವರ್ಷ 300 ಕೋಟಿಗೂ ಹೆಚ್ಚು ಹಣ ಸರ್ಕಾರಕ್ಕೆ ಹೋಗುತ್ತಿದೆ. ಮುಂದಿನ ವರ್ಷಗಳಲ್ಲಿ 12 ಸಾವಿರ ಎಕರೆ ಪ್ರದೇಶಗಳಲ್ಲಿ ಐಟಿಐಆರ್ ಕೈಗಾರಿಕಾ ಪ್ರದೇಶವಾಗಲಿರುವುದರಿಂದ ಒಂದು ಕೋಟಿಗೂ ಹೆಚ್ಚು ಮಂದಿ ವಾಸವಿರುತ್ತಾರೆ. ಆದ್ದರಿಂದ ಜಿಲ್ಲಾ ಕೇಂದ್ರವಾಗಲು ದೇವನಹಳ್ಳಿ ಸೂಕ್ತವಾಗಿದೆ ಎಂದು ಶಿವಪ್ಪರವರು ತಿಳಿಸಿ ಮುಂದಿನ ಹೋರಾಟದ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಮುಖಂಡರಾದ ಗೋಪಾಲಕೃಷ್ಣರವರು ಮಾತನಾಡಿ ದೇವನಹಳ್ಳಿ ವಿಜಯಪುರ ರಸ್ತೆಯಲ್ಲಿ ಸರ್ಕಾರಕ್ಕೆ ಸೇರಿದ ಸರ್ವೆ ನಂ. 134 ರಲ್ಲಿ ಸುಮಾರು 11 ಎಕರೆ ಪ್ರದೇಶವಿದೆ ಅಲ್ಲದೆ ಪ್ರವಾಸಿ ಮಂದಿರ ಮುಂಭಾಗದಲ್ಲಿ ಜಿಲ್ಲಾ ಪಂಚಾಯಿತಿಗೆ ಸೇರಿದ ಸುಮಾರು ಮೂರು ಎಕರೆ ಪ್ರದೇಶವಿದ್ದು ಅಲ್ಲಿ ಜಿಲ್ಲಾ ಪಂಚಾಯಿತಿ ಕಚೇರಿ ಅಲ್ಲದೆ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ನಿರ್ಮಾಣಕ್ಕೂ ಅವಕಾಶವಿದೆ ಎಂದರು.
ಇದೇ ಸಂದರ್ಭದಲ್ಲಿ ಮುಖಂಡರಾದ ಎ.ಶಿವರಾಮಯ್ಯ, ತಾಲೂಕು ಹಿಂದುಳಿದ ಜಾತಿಗಳ ಒಕ್ಕೂಟ ಅಧ್ಯಕ್ಷರಾದ ಮುನಿಶಾಮಪ್ಪ, ಕಾರ್ಯದರ್ಶಿ ಎನ್.ಚಂದ್ರಶೇಖರ್, ಜಿಲ್ಲಾ ಸಂಚಾಲಕರಾದ ಅಂಬರೀಶ್, ಕನ್ನಡ ಜಾಗೃತಿ ವೇದಿಕೆಯ ಆರ್.ಎಸ್.ಆಚಾರ್ಯ, ಕರ್ನಾಟಕ ರಕ್ಷಣಾ ವೇದಿಕೆಯ ಸುರೇಶ್ ಇವರುಗಳು ಮಾತನಾಡಿ ಜಿಲ್ಲಾ ಹೋರಾಟ ಸಮಿತಿಗೆ ತಮ್ಮ ಬೆಂಬಲ ನೀಡುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

