ಹಣ, ದಾಖಲೆ ಪ್ರಯಾಣಿಕನಿಗೆ ಮರಳಿಸಿದ ನಿರ್ವಾಹಕ, ಚಾಲಕ
ಕ.ಪ್ರ.ವಾರ್ತೆ ಟಿ ದೊಡ್ಡಬಳ್ಳಾಪುರ ಟಿ ಆ.11
ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ಡಾ.ಎಂ.ಎನ್.ಶ್ವೇತಾ ಮಹಾಬಲೇಶ್ವರ್ ಸಾರಿಗೆ ಬಸ್ನಲ್ಲಿ ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವೇಳೆ 10 ಸಾವಿರ ರು ನಗದು, ಪಾನ್ ಕಾರ್ಡ್ ಸೇರಿದಂತೆ ಹಲವು ಮೂಲದಾಖಲೆ ಪತ್ರಗಳನ್ನು ಕಳೆದುಕೊಂಡಿದ್ದರು. ಈ ಹಣ ಮತ್ತು ದಾಖಲೆ ಪತ್ರಗಳಿದ್ದ ಬ್ಯಾಗ್ ಬಸ್ಸಿನ ಚಾಲಕ ಮತ್ತು ಸಿಬ್ಬಂದಿಗೆ ದೊರೆತಿದೆ. ಅವರು ಅದನ್ನು ಶ್ವೇತಾ ಅವರ ಕುಟುಂಬಕ್ಕೆ ಸಕಾಲದಲ್ಲಿ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಬಸ್ಸಿನ ಚಾಲಕ ಹರೀಶ್ ಮತ್ತು ನಿರ್ವಾಹಕ ಶಿವಕುಮಾರ್ ಈ ಪ್ರಾಮಾಣಿಕತೆ ಮೆರೆದಿರುವ ಕೆಎಸ್ಆರ್ಟಿಸಿ ಸಿಬ್ಬಂದಿ. ದೊಡ್ಡಬಳ್ಳಾಪುರ ಬಸ್ ಘಟಕದಲ್ಲಿ ವ್ಯವಸ್ಥಾಪಕ ಸತೀಶ್, ಅಧಿಕಾರಿಗಳಾದ ನಾರಾಯಣಪ್ಪ, ವೆಂಕಟೇಶ್ ಮತ್ತಿತರರು ಹಣ ಮತ್ತು ದಾಖಲೆಗಳನ್ನು ಕುಟುಂಬಕ್ಕೆ ಹಿಂತಿರುಗಿಸಿದ್ದಾರೆ. ಚಾಲಕ ಮತ್ತು ನಿರ್ವಾಹಕರ ಪ್ರಾಮಾಣಿಕತೆ ಪ್ರಶಂಸಾರ್ಹ. ಸಮಾಜದಲ್ಲಿ ಪ್ರಾಮಾಣಿಕರಿಗೆ ಯಾವ್ತತೂ ಗೌರವ ಸಲ್ಲುತ್ತದೆ ಎಂದು ಶ್ವೇತಾ ತಂದೆ ಮೇಜರ್ ಮಹಾಬಲೇಶ್ವರ್ ಪ್ರತಿಕ್ರಿಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

