ಬೆಂಗಳೂರು ಗ್ರಾಮಾಂತರ

ಜಿಲ್ಲಾಧಿಕಾರಿಯಿಂದ ಧ್ವಜಾರೋಹಣ

Published On :

ರಾಮನಗರ: ಆ.15ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ 67ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ ಧ್ವಜಾರೋಹಣ ನೆರವೇರಿಸುವರು. ಕಾರ್ಯಕ್ರಮದಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕನ್ನಡ, ಸಂಸ್ಕೃತಿ ಇಲಾಖೆ ಮತ್ತು ವಾರ್ತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಸವರಾಜು, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಎಂ.ಎಸ್.ರವಿಶಂಕರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಅನುಪಮ್ ಅಗ್ರವಾಲ್, ಜಿ.ಪಂ. ಸಿಇಒ ಡಾ.ವೆಂಕಟೇಶ್ ಭಾಗವಹಿಸುವರು.
ಸಹಕಾರ ಸಂಘಗಳಿಗೆ ಚುನಾವಣೆ: ತರಬೇತಿ
ರಾಮನಗರ: ಜಿಲ್ಲಾ ವ್ಯಾಪ್ತಿಯ ಸಹಕಾರ ಸಂಘಗಳಿಗೆ ಚುನಾವಣೆ ನಡೆಸುವ ಸಂಬಂಧ ನಗರದ ಕಂದಾಯ ಭವನದಲ್ಲಿರುವ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯಲ್ಲಿ ಸೋಮವಾರ ವಿವಿಧ ಇಲಾಖೆಗಳ ನೌಕರರಿಗೆ ಚುನಾವಣಾಧಿಕಾರಿ ಹಾಗೂ ಉಪ ನಿಬಂಧಕ ಕೆ.ಎನ್.ನಂಜುಂಡೇಗೌಡ ತರಬೇತಿ ನೀಡಿದರು.
ಪತ್ನತವರು ಮನೆಗೆ ಪತಿ ಆತ್ಮಹತ್ಯೆ
ನೆಲಮಂಗಲ: ವ್ಯಕ್ತಿಯೋರ್ವ ಹೆಂಡತಿ   ತವರು ಮನೆಗೆ ಹೋದಳೆಂದು ನೊಂದು ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದಾಬಸ್‌ಪೇಟೆ ಪೊಲೀಸ್ ಠಾಣೆಯ ಮಾದೇನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ನರಸಿಂಹಮೂರ್ತಿ (28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈತನ ಹೆಂಡತಿ ಕಳೆದ ಕೆಲ ದಿನಗಳ ಹಿಂದೆ ಚಿಕೂನ್‌ಗುನ್ಯ ರೋಗದಿಂದ ಬಳಲುತ್ತಿದ್ದಾಗ  ಆಕೆಗೆ ಸರಿಯಾದ ರೀತಿ ಚಿಕಿತ್ಸೆ  ಕೊಡಿಸಲಿಲ್ಲ ಎಂದು ಆರೋಪಿಸಿ ಈಕೆಯ ತಂದೆ ಮಗಳನ್ನು ತವರು ಮನೆಗೆ ಕರೆದುಕೊಂಡು ಹೋಗಿ ರೋಗಕ್ಕೆ ಚಿಕಿತ್ಸೆ ಕೊಡಿಸುತ್ತಿದ್ದರು.  ಈತ ಮದ್ಯಪಾನ ಮಾಡಿ ನಂತರ ಮನೆಯಲ್ಲಿಯೇ ನೇಣು ಬಿಗಿದುಕೊಂಡಿದ್ದಾನೆ ಎಂದು ದಾಬಸ್‌ಪೇಟೆ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್  ರವಿ ತಿಳಿಸಿದ್ದಾರೆ.
ಅರಣ್ಯಾಧಿಕಾರಿಗಳ ವಿರುದ್ಧ ಪ್ರತಿಭಟನೆ
ಮಾಗಡಿ: ಹಲವಾರು ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಬೇಸಾಯ ಮಾಡಿಕೊಂಡು ಬರುತ್ತಿರುವ ಬಡ ರೈತರನ್ನು ಒಕ್ಕಲೆಬ್ಬಿಸುವ ಅರಣ್ಯ ಇಲಾಖೆಯ ಅಧಿಕಾರಿಗಳ ನೀತಿ ವಿರುದ್ಧ  ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಆ.13 ರಂದು ಬೆಳಿಗ್ಗೆ 10.30ಕ್ಕೆ ತಾಲೂಕಿನ ಗಟ್ಟೀಪುರದದಲ್ಲಿ ಪ್ರತಿಭಟನಾ ಧರಣಿ ಆರಂಭಿಸುವುದಾಗಿ ಸಂಘದ ಅಧ್ಯಕ್ಷ ರಾಮಚಂದ್ರಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.