'ಸಮಾಜದ ಹಿತಕ್ಕಾಗಿ ಉತ್ತಮ ಕರ್ತವ್ಯ ಅಗತ್ಯ'
ನೆಲಮಂಗಲ: ಸರ್ಕಾರಿ ಸೇವಾ ದಿನಗಳಲ್ಲಿ ಸಮಾಜದ ಹಿತ ಕಾಯುವ ದೃಷ್ಟಿಯಿಂದ ಉತ್ತಮ ಕರ್ತವ್ಯ ನಿರ್ವಹಿಸುವುದು ಬಹಳ ಮುಖ್ಯ ಎಂದು ಶಿಕ್ಷಕರ ಸಂಘದ ಅಧ್ಯಕ್ಷ ಜಿ.ವಿ.ಕುಮಾರ್ ಅಭಿಪ್ರಾಯಪಟ್ಟರು.
ಪಟ್ಟಣದ ಗುರುಭವನದಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಶಿಕ್ಷಕ ಕೆ.ಜಿ.ಭೀಮರಾಜು ಅವರ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕರ್ತವ್ಯದಲ್ಲಿ ಸಮಯ ಪಾಲನೆ ನಿಷ್ಠೆಯನ್ನು ಮುಖ್ಯವಾಗಿರಿಸಿಕೊಂಡವರು ಉತ್ತಮ ರೀತಿಯಲ್ಲಿ ಬಾಂಧವ್ಯ ಹೊಂದುತ್ತಾರೆ. ಪ್ರತಿಯೊಬ್ಬರಿಗೂ ವೃತ್ತಿಯಲ್ಲಿ ನಿವೃತ್ತಿ ಸಹಜವಾದ ಪ್ರಕ್ರಿಯೆ. ಕೆಲಸ ದೊರೆತ ಸಂದರ್ಭದಲ್ಲಾಗುವ ಸಂತೋಷಕ್ಕಿಂತಲೂ ನಿವೃತ್ತಿ ಸಮಯದಲ್ಲಾಗುವ ಮಾನಸಿಕ ಬೇಸರ ಅದಕ್ಕಿಂತ ಮಿಗಿಲಾಗಿರುತ್ತದೆ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಕೆ.ಜಿ.ಭೀಮರಾಜು, ಜೀವನದ ಹಾದಿ ಸುಗಮವಾಗಿ ಹರ್ಷದಾಯಕವಾಗಿರಬೇಕಾದರೆ ಹಾಸ್ಯ ಮುಖ್ಯವಾಗಿ ಇರಬೇಕಾಗುತ್ತದೆ. ಜೀವನದಲ್ಲಿ ಬಂದೊದಗುವ ನೋವು-ನಲಿವುಗಳನ್ನು ಸಮಾನವಾಗಿ ಸ್ವೀಕರಿಸಬೇಕು. ಪ್ರತಿಯೊಬ್ಬರು ಎಲ್ಲರೊಳಗೊಂದಾಗುವ ಮನೋಭಾವನೆ ಬೆಳೆಸಿಕೊಂಡು ಉತ್ತಮ ಸಮಾಜ ನಿರ್ಮಿಸಿ ಯುವ ಪೀಳಿಗೆಯನ್ನು ಸನ್ಮಾರ್ಗದತ್ತ ಕೊಂಡೊಯ್ಯುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದ ಅವರು, ಆಡಳಿತ ಮಂಡಳಿ ಮತ್ತು ಸಹಪಾಠಿಗಳಿಗೆ ಅಭಿನಂದನೆ ಸಲ್ಲಿಸಿದರು.
ಪ್ರಧಾನ ಕಾರ್ಯದರ್ಶಿ ಎಸ್. ಬಸಣ್ಣ, ಖಜಾಂಚಿ ಬಿ.ಶಿವಕುಮಾರ್, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಶೈಲಜಾ, ವಿಶಾಲ್ ಆಂಗ್ಲಶಾಲೆಯ ಸಂಸ್ಥಾಪಕ ಟಿ.ಕೆ.ನರಸೇಗೌಡ, ತಾ.ಪ್ರಾ.ಶಾ.ಶಿ. ಸಂಘ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ವಿದ್ಯಾ ಇಲಾಖೆ ನೌಕರರ ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

