ಉಪ ಚುನಾವಣೆ; ವೀಕ್ಷಕರ ನೇಮಕಕ್ಕೆ ರೇವಣ್ಣ ಒತ್ತಾಯ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಆಡಳಿತ ಪಕ್ಷ ಅಧಿಕಾರ ದುರುಪಯೋಗ ಹಾಗೂ ಹಣದ ಹೊಳೆ ಹರಿಸುತ್ತಿದ್ದು, ಚುನಾವಣಾ ಆಯೋಗ ತಕ್ಷಣ ವಿಶೇಷ ವೀಕ್ಷಕರನ್ನು ನೇಮಕಗೊಳಿಸಬೇಕು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಒತ್ತಾಯಿಸಿದ್ದಾರೆ.
ಸರ್ಕಾರ ರಾಜ್ಯದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇದನ್ನು ತಡೆಯುವುದಕ್ಕೆ ಬೇರೆ ರಾಜ್ಯದ ಅಧಿಕಾರಿಗಳನ್ನು ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ವೀಕ್ಷಕರನ್ನಾಗಿ ನಿಯುಕ್ತಿಗೊಳಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಆಗ್ರಹಿಸಿದ್ದಾರೆ.
ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಯಾವುದೇ ಹೊಂದಾಣಿಕೆ ಮಾಡಿಕೊಂಡಿಲ್ಲ. ಕೇಂದ್ರದ ಯುಪಿಎ ಸರ್ಕಾರಕ್ಕೆ ನಾವು ಈ ಹಿಂದೆ ಬೆಂಬಲ ವ್ಯಕ್ತಪಡಿಸಿದ್ದೇವೆ. ಹೀಗಾಗಿ ಬಿಜೆಪಿ ಜತೆ ಸಖ್ಯದ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು.
ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಈಗ ಬಿಜೆಪಿ ನಾಯಕರ ಮನೆ ಬಾಗಿಲು ತಟ್ಟುವಂತ ಸ್ಥಿತಿ ನಿರ್ಮಾಣವಾಗಿದೆ. ಮಾಜಿ ಸಂಸದ ಎಂ. ಶ್ರೀನಿವಾಸ್ ಹಾಗೂ ಅವರ ಬೆಂಬಲಿಗರನ್ನು ಸೆಳೆದುಕೊಂಡಿದೆ. ಬಿಜೆಪಿಯವರಿಗೆ ಬಾಗಿಲು ತೆರೆದಿರುವ ಕಾಂಗ್ರೆಸ್ ಮುಖಂಡರು ಅಲ್ಪಸಂಖ್ಯಾತ ಬಂಧುಗಳಿಗೆ ಯಾವ ರೀತಿ ಉತ್ತರ ನೀಡುತ್ತಾರೆ? ಎಂದು ಪ್ರಶ್ನಿಸಿದರು.
ದೇವೇಗೌಡರ ಕುಟುಂಬಕ್ಕೆ ತಿಥಿ ಊಟ ಎಂದರೆ ಬಲು ಇಷ್ಟ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಅವರು 2014ರ ಸಾರ್ವತ್ರಿಕ ಚುನಾವಣೆ ಬರಲಿ. ಆಗ ಯಾರ ತಿಥಿ ಊಟ ಎಂಬುದು ಗೊತ್ತಾಗುತ್ತದೆ ಎಂದರು.
ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡುವುದು ಸಿದ್ದರಾಮಯ್ಯನವರಿಗೆ ಶೋಭೆ ತರುವುದಿಲ್ಲ. ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೆ ಏರಿದವರು ಹಿಂದಿನದನ್ನು ಮರೆಯಬಾರದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

