ಬೆಂಗಳೂರು ಗ್ರಾಮಾಂತರ

ರಾ-ಚ ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದ ರೂವಾರಿಗಳ ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ

Published On :

ಕ.ಪ್ರ.ವಾರ್ತೆ   ರಾಮನಗರ   ಆ.14
ರಾ-ಚ ನಗರಾಭಿವೃದ್ಧಿ ಪ್ರಾಧಿಕಾರದ ಬಹುಕೋಟಿ ಹಗರಣದ ರೂವಾರಿಗಳಾದ ಕೆಬ್ಬಳ್ಳಿ ಆನಂದ್ ಮತ್ತು ನಾಗಲಿಂಗಸ್ವಾಮಿ ಅವರ ಪೊಲೀಸ್ ಕಸ್ಟಡಿ ಅವಧಿಯನ್ನು ಆ.19ರವರೆಗೆ ವಿಸ್ತರಿಸಿ ರಾಮನಗರ ನ್ಯಾಯಾಲಯ ಆದೇಶಿಸಿದೆ.
ಇಬ್ಬರು ಆರೋಪಿಗಳ ಕಸ್ಟಡಿ ಅವದಿ ಪೂರ್ಣಗೊಂಡಿದ್ದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಬುಧವಾರ ಪ್ರಧಾನ ಸಿವಿಲ್ ನ್ಯಾಯಾಲಯ(ಹಿರಿಯ ಶ್ರೇಣಿ)ಕ್ಕೆ ಹಾಜರುಪಡಿಸಿ, ವಿಚಾರಣೆ ಬಾಕಿ ಇರುವ ಕಾರಣಕ್ಕೆ ಇನ್ನೂ 7 ದಿನ ಕಸ್ಟಡಿಯಲ್ಲೇ ಮುಂದುವರೆಸುವಂತೆ ಮನವಿ ಮಾಡಿದ್ದರು.
ಪೊಲೀಸರು ಮತ್ತು ಆರೋಪಿಗಳ ಪರ ವಕೀಲರ ವಾದ ಆಲಿಸಿದ ನ್ಯಾಯಾಧೀಶ ಎಸ್.ಎಚ್.ಹೊಸಗೌಡರ, ಕಸ್ಟಡಿ ಅವಧಿ ಮುಂದುವರಿಕೆಗೆ ಇರುವ ಅನಿವಾರ್ಯತೆಯನ್ನು ಪ್ರಶ್ನಿಸಿದರು. ಬಳಿಕ 5 ದಿನದವರೆಗೆ ಕಸ್ಟಡಿ ಮುಂದುವರಿಕೆ ಸೂಚಿಸಿದರು. ಲೋಕಸಭೆ ಮರು ಚುನಾವಣೆಯಲ್ಲಿ ಗಣ್ಯಾತಿ ಗಣ್ಯರು ಜಿಲ್ಲೆಗೆ ಭೇಟಿ ನೀಡುತ್ತಿರುವುದರಿಂದ ಬಂದೋಬಸ್ತ್ ಕ್ಕಾರ್ಯ ಹೆಚ್ಚಾಗಿದೆ. ಹೀಗಾಗಿ ಆರೋಪಿಗಳ ವಿಚಾರಣೆ ಇನ್ನೂ ಮುಗಿದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ನ್ಯಾಯಾಲಯಕ್ಕೆ ಸ್ಪಷ್ಟಪಡಿಸಿದರು.
ಜಾಮೀನು ನಿರಾಕರಣೆ: ಏತನ್ಮಧ್ಯೆ, ಈಗಾಗಲೇ ನ್ಯಾಯಾಂಗ ವಶದಲ್ಲಿರುವ ಹಗರಣದ ಮಾಸ್ಟರ್ ಮೈಂಡ್ ಚಿದಾನಂದ್ ಹಾಗೂ ಮತ್ತೊಬ್ಬ ಆರೋಪಿ ಶೇಖರ್ ಅವರಿಗೆ ಜಾಮೀನು ಕೋರಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಪ್ರಧಾನ ಸಿವಿಲ್ ನ್ಯಾಯಾಲಯ(ಹಿರಿಯ ಶ್ರೇಣಿ) ತಿರಸ್ಕರಿಸಿದೆ.
ಜಾಮೀನು ನಿರಾಕರಣೆ ಹಿನ್ನೆಲೆಯಲ್ಲಿ ಚಿದಾನಂದ ಮತ್ತು ಶೇಖರ್ ನ್ಯಾಯಾಂಗ ಕಸ್ಟಡಿ ಅವಧಿ ಮುಂದುವರೆದಿದೆ. ಇದೀಗ ಆರೋಪಿಗಳ ಪರ ವಕೀಲರು ಜಾಮೀನು ಕೋರಿಕೆ ಅರ್ಜಿಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಇಲ್ಲವೇ ಹೈಕೋರ್ಟ್‌ಗೆ ಸಲ್ಲಿಸಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.