ಬೆಂಗಳೂರು ಗ್ರಾಮಾಂತರ

ಕಾಂಗ್ರೆಸ್ ಅಭ್ಯರ್ಥಿಗಳಿಗೆದಲಿತ ಸಮುದಾಯಬೆಂಬಲ: ಶಿವರಾಮು

Published On :

ರಾಮನಗರ: ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ದಲಿತ ಸಮುದಾಯವು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಛಲವಾದಿ ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಶಿವರಾಮು ಘೋಷಿಸಿದರು.  ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ದಲಿತ ಸಮುದಾಯವನ್ನು ಕಡೆಗಣಿಸಿದೆ. ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಸಾಮಾಜಿಕ ನ್ಯಾಯ ಇದೆ. ದಲಿತರ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ ರಕ್ಷಣೆ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಗುರುವಾರ ಸ್ಫೂರ್ತಿ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
30 ವರ್ಷಗಳ ನನ್ನ ಸರ್ಕಾರಿ ಸೇವೆಯಲ್ಲಿ ನಿಷ್ಠೆಯಿಂದ ಜನಸೇವೆ ಮಾಡಿದ್ದೇನೆ. ಅದನ್ನು ಮುಂದುವರಿಸುವ ಸದುದ್ದೇಶದಿಂದ ರಾಜಕೀಯಕ್ಕೆ ಸೇರ್ಪಡೆಗೊಂಡಿದ್ದೇನೆ. ಬೇರೆ ಪಕ್ಷಗಳೂ ಕೂಡ ನನ್ನನ್ನು ಪಕ್ಷ ಸೇರುವಂತೆ ಆಹ್ವಾನಿಸಿದ್ದವು. ಆದರೆ ಕಾಂಗ್ರೆಸ್‌ನ ತತ್ವ, ಸಿದ್ಧಾಂತವನ್ನು ಒಪ್ಪಿ ಆ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದರು.  ಪಕ್ಷದ ಹೈಕಮಾಂಡ್ ನನಗೆ ಟಿಕೆಟ್ ನೀಡಿದಲ್ಲಿ ಮುಂಬರುವ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಚಿತ್ರದುರ್ಗ ಅಥವಾ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಛಿಸಿದ್ದೇನೆ. ಟಿಕೆಟ್ ನೀಡದಿದ್ದರೂ ಕೂಡ ಕಾಂಗ್ರೆಸ್ ಬಿಡುವುದಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.  ಗೋಷ್ಠಿಯಲ್ಲಿ ಛಲವಾದಿ ಮಹಾಸಭಾದ ತಾಲೂಕು ಅಧ್ಯಕ್ಷ ನಟರಾಜ್, ಶಿವಶಂಕರ್, ಗವಿಯಪ್ಪ, ವೆಂಕಟೇಶ್, ರಮೇಶ್, ಶಿವಲಿಂಗಯ್ಯ, ಜಯರಾಮು ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.