ಕೃಷಿ ಉಪಕಣಗಳ ವಸ್ತು ಪ್ರದರ್ಶನ
ಹೊಸಕೋಟೆ: ಕೃಷಿಯಲ್ಲಿ ಬಳಸಬಹುದಾದ ಉಪಕರಣಗಳ ಬಗ್ಗೆ ರೈತರು ಮಾಹಿತಿ ನೀಡಬೇಕಾದ್ದು ಅಗತ್ಯವಾಗಿದೆ ಎಂದು ಗ್ರಾಮಾಂತರ ಜಿ.ಪಂ.ಮಾಜಿ ಅಧ್ಯಕ್ಷ ಸಿ.ಮುನಿಯಪ್ಪ ಹೇಳಿದರು.
ಅವರು ಇಲ್ಲಿನ ದೇವಕಿ ಕಲ್ಯಾಣ ಮಂಟಪದಲ್ಲಿ ಕೃಷಿ ಮತ್ತು ಗ್ರಾಹಕರ ಅಭಿವೃದ್ಧಿ ಸಂಸ್ಥೆ ಏರ್ಪಡಿಸಿದ್ದ ಕೃಷಿ ಗೃಹೋಪಯೋಗಿ ಉಪಕರಣಗಳ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.
ಕೃಷಿಯಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕುತ್ತಿಲ್ಲವಾದ ಕಾರಣ ರೈತರು ಬೇಸಾಯದಿಂದ ವಿಮುಖರಾಗುತ್ತಿರುವ ಸಂದರ್ಭದಲ್ಲಿ ಯಂತ್ರೋಪಕರಣಗಳ ಬಳಕೆ ಅನಿವಾರ್ಯವಾಗಿದೆ. ಕೃಷಿಯಲ್ಲಿ ಅಳವಡಿಸಿಕೊಳ್ಳಬಹುದಾದ ತಂತ್ರಜ್ಞಾನದ ಬಗ್ಗೆ ತಿಳಿವಳಿಕೆ ಪಡೆಯಲು ಇಂತಹ ಪ್ರದರ್ಶನಗಳು ಸಹಕಾರಿಯಾಗಿವೆ ಎಂದರು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘಟ ಉಪಾಧ್ಯಕ್ಷ ಮಂಡಿಬೆಲೆ ರಾಜಣ್ಣ ಮಾತನಾಡಿ, ಕೇವಲ ನಗರ ಪಟ್ಟಣ ಪ್ರದೇಶಗಳಿಗೆ ಮಾತ್ರ ಇಂತಹ ಪ್ರದರ್ಶನಗಳನ್ನು ಸೀಮಿತಗೊಳಿಸದೇ ಹೋಳಿ ಮಟ್ಟದಲ್ಲೂ ಏರ್ಪಡಿಸಲು ಗಮನ ಹರಿಸಿದಲ್ಲಿ ಮಾತ್ರ ಗ್ರಾಮಿಣ ಪ್ರದೇಶದ ರೈತರಿಗೆ, ಮಹಿಳೆಯರಿಗೆ ಅನುಕೂಲವಾಗಲಿದೆ ಎಂದರು. ಪ್ರದರ್ಶನದಲ್ಲಿ ರೇಷ್ಮೆ ಇಲಾಖೆ, ಹಾಲು ಒಕ್ಕೂಟ ಸೇರಿದಂತೆ ಹಲವೂ ಸಂಸ್ಥೆಗಳು ಭಾಗವಹಿಸಿದ್ದು ಮೂರು ದಿನಗಳ ಕಾಲ ನಡೆಯುವ ಪ್ರದರ್ಶನದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವ್ಯವಸ್ಥಾಪಕ ಎ.ಎಂ.ಸುರೇಶ್ ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

