ಬೆಂಗಳೂರು ಗ್ರಾಮಾಂತರ

ಜೆಡಿಎಸ್ ಮೈತ್ರಿಯಿಂದ ಕೋಮುವಾದಕ್ಕೆ ಪುಷ್ಟಿ: ಟೀಕೆ

Published On :

ರಾಮನಗರ: ಬಿಜೆಪಿ, ಕೆಜೆಪಿ ಜತೆ ಅಪವಿತ್ರ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಪಕ್ಷವು ಅವಕಾಶವಾದಿ ರಾಜಕಾರಣ ಮಾಡುತ್ತಿದೆ. ಈ ಮೈತ್ರಿ ಕೋಮುವಾದಕ್ಕೆ ಪುಷ್ಟಿ ನೀಡಿದಂತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ ಜಿ.ಎ. ಲಕ್ಷ್ಮೀನಾರಾಯಣ ಗೌಡ ಆಪಾದಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮನಯ್ಯ ಅವರು ರೈತಪರ ಚಿಂತಕರಾಗಿರುವುದರಿಂದ ಅವರ ಕೈಬಲಪಡಿಸಲು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವ ನಿರ್ಧಾರಕ್ಕೆ ಬಂದಿರುವುದಾಗಿ ನಗರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಸಂಬಂಧ ಕೃಷಿ ಬೆಲೆ ನಿಗದಿ ಆಯೋಗ ರಚನೆಗೆ ಸಿದ್ದರಾಮಯ್ಯ ಕ್ರಮ ಕೈಗೊಂಡಿದ್ದಾರೆ. ಅಕ್ರಮ-ಸಕ್ರಮ ಯೋಜನೆಯಡಿ ರೈತರ ಪಂಪ್‌ಸೆಟ್‌ಗಳ ಸರ್ವೆ ನಡೆಸಿ, ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುತ್ತಿದೆ ಹಾಗೂ ಸೌರಶಕ್ತಿಯಿಂದ ವಿದ್ಯುತ್ ಉತ್ಪಾದನೆಗೆ ಸಹಾಯಧನ ನೀಡಲು ನಿರ್ಧರಿಸಿರುವುದು ರೈತ ಸಮುದಾಯ ಸ್ವಾಗತಿಸುತ್ತದೆ ಎಂದರು.
ಜಿಲ್ಲೆಯಲ್ಲಿ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ಡಾ. ಪರಮಶಿವಯ್ಯ ವರದಿಯನ್ನು ಅನುಷ್ಠಾನಗೊಳಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ತೋರಿರುವುದರಿಂದ ಕಾಂಗ್ರೆಸ್‌ಅನ್ನು ಬೆಂಬಲಿಸುತ್ತಿರುವುದಾಗಿ ಸ್ಪಷ್ಟಪಡಿಸಿದರು.
ಮುನಿರಾಜು, ಲಿಂಗೇಗೌಡ, ಶ್ರೀನಿವಾಸ್, ಸಿದ್ದರಾಜು, ಶೇಖರ್, ರಮೇಶ್, ಪಾತಯ್ಯ, ಗೋವಿಂದಯ್ಯ, ಚೂಡೇಗೌಡ, ಮಹದೇವ, ತಿಮ್ಮಯ್ಯ ಮುಂತಾದವರು ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.