ಬೆಂಗಳೂರು ಗ್ರಾಮಾಂತರ

ಟ್ಯಾಂಕರ್ ಮೂಲಕ ನೀರು ಸರಬರಾಜು: ಮುಖ್ಯಾಧಿಕಾರಿ

Published On :

ದೇವನಹಳ್ಳಿ: ಕೊಡ ನೀರಿಗೆ 3 ರಂತೆ ಮಾರಾಟವಾಗುತ್ತಿರುವ ಬಗ್ಗೆ ಕನ್ನಡಪ್ರಭ ಪತ್ರಿಕೆಯಲ್ಲಿ ವರದಿಯಾಗಿರುವ ಬಗ್ಗೆ ಪುರಸಭಾ ಮುಖ್ಯಾಧಿಕಾರಿ ಮಂಜುನಾಥ್ ಅವರು ಪ್ರತಿಕ್ರಿಯಿಸಿ ಪುರಸಭೆ ವ್ಯಾಪ್ತಿಗೆ ಸೇರಿದ ಎಲ್ಲ 23 ವಾರ್ಡ್‌ಗಳಿಗೆ ನಿಗದಿತ ಸಮಯಕ್ಕೆ ಕುಡಿಯುವ ನೀರನ್ನು ಪೈಪ್‌ಲೈನ್ ಮೂಲಕ ಹಾಗೂ ಟ್ಯಾಂಕರ್‌ಗಳ ಮೂಲಕ ಸರಬರಾಜು ಮಾಡಲಾಗುತ್ತಿದೆ ಎಂದರು.ಇತ್ತೀಚಿನ ದಿನಗಳಲ್ಲಿ ವಿದ್ಯುತ್ ಕೊರತೆಯಿಂದಾಗಿ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ತೊಂದರೆಯಾಗಿದೆ ಎಂದು ಮುಖ್ಯಾಧಿಕಾರಿಗಳು ತಿಳಿಸಿ ಪಟ್ಟಣದ ಯಾವುದೇ ಭಾಗದಿಂದ ಕುಡಿಯುವ ನೀರಿನ ತೊಂದರೆ ಇದ್ದ ಬಗ್ಗೆ ಪುರಸಭೆಗೆ ದೂರು ನೀಡಿದ ಕ್ಷಣದಲ್ಲಿಯೇ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲಾಗುವುದು ಎಂದು ತಿಳಿಸಿದರು. ನಾಗರಿಕರು ಮೊ. 98451825575, 9845420010 ಸಂಪರ್ಕಿಸಬೇಕೆಂದು ಕೋರಲಾಗಿದೆ.   

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.