ಬೆಂಗಳೂರು ಗ್ರಾಮಾಂತರ

ವಸ್ತು ಪ್ರದರ್ಶನ ಯಶಸ್ವಿ

Published On :


ರಾಮನಗರ: ನಗರದ ಎಂ.ಎಚ್. ಶಾಲೆಯ ವಿದ್ಯಾರ್ಥಿಗಳಿಂದ ಇಂಗ್ಲಿಷ್, ಕನ್ನಡ, ಹಿಂದಿ, ವಿಜ್ಞಾನ, ಗಣಿತ, ಸಮಾಜ ವಿಜ್ಞಾನ, ಜನಪದ ಸಂಸ್ಕೃತಿ, ಪರಿಸರ ಸಂರಕ್ಷಣೆ, ಆರೋಗ್ಯ ಮತ್ತು ಸಂಪತ್ತು ಸಂರಕ್ಷಣೆ ಹಾಗೂ ಜನಪದ ಶೈಲಿಯ ವೇಷಭೂಷಣ, ಕಸದಬುಟ್ಟಿಗೆ ಸೇರುವ ವಸ್ತುಗಳಿಂದ ತಯಾರಿಸಿದ ವಸ್ತು ಪ್ರದರ್ಶನ ಶಾಲೆಯಲ್ಲಿ ನಡೆಯಿತು.
ಮಕ್ಕಳ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ತ್ಯಾಜ್ಯ ವಸ್ತುಗಳಿಂದ ಕಲಾಕೃತಿಗಳನ್ನು ರಚಿಸುವ ಕಲೆಯನ್ನು ಕಲಿಸಿ, ಮಕ್ಕಳಿಂದಲೇ ತಯಾರಿಸಿದ ವಸ್ತುಗಳನ್ನು ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಚ್.ಚಂದ್ರಶೇಖರ್ ತಿಳಿಸಿದರು. ಮಕ್ಕಳು ಪಾಠದ ಜತೆಗೆ ಇನ್ನಿತರೆ ಕ್ಷೇತ್ರಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.