ಸರ್ಕಾರಿ ಭೂಮಿ ಒತ್ತುವರಿ ಕುರಿತು ಬರೆದ ಪತ್ರಕ್ಕೂ ಕಿಮ್ಮತ್ತಿಲ್ಲ: ಆರೋಪ
ನೆಲಮಂಗಲ: ಹೊನ್ನೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸುಮಾರು 174 ಎಕರೆ ಸರ್ಕಾರಿ ಜಮೀನನ್ನು ಬಲಾಢ್ಯರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಭೂಮಿಯನ್ನು ತೆರವುಗೊಳಿಸುವಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆದು ಒತ್ತಾಯಿಸಿದರೂ ಇಲಾಖೆಯ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಗ್ರಾಮ ಪಂಚಾಯ್ತಿ ಅಧ್ಯಕ್ಷ ಜಗದೀಶ್ ಚೌಧರಿ ತೀವ್ರ ಅಸಮಧಾನ ವ್ಯಕ್ತಪಡಿಸಿದರು.
ಅವರು ಸೋಮವಾರ ತಾಲೂಕಿನ ಹೊನ್ನೇನಹಳ್ಳಿ ಗ್ರಾಮ ಪಂಚಾಯ್ತಿ ಆವರಣದಲ್ಲಿ ನಡೆದ ಗ್ರಾಮ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಗ್ರಾಮ ಸಭೆಗಳಲ್ಲಿ ತಾಲ್ಲೂಕಿನ 24 ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಿ ಜನರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದೇ ಈ ಸಭೆಯ ಉದ್ದೇಶವಾಗಿದ್ದರೂ ಇಂದು ಈ ಸಭೆಗೆ ಕೆಲವೇ ಇಲಾಖೆಯ ಸಿಬ್ಬಂದಿ ಮಾತ್ರ ಬಂದಿದ್ದಾರೆ. ಅಧಿಕಾರಿಗಳಲ್ಲೇ ನಿರ್ಲಕ್ಷ ಇದ್ದರೆ ಇನ್ನೂ ಜನರಿಗೆ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಮಾಹಿತಿ ನೀಡುವವರು ಯಾರು ಎಂದು ಪ್ರಶ್ನಿಸಿ ಸರ್ಕಾರದಿಂದ ಜನರಿಗೆ ದೊರೆಯುವ ಸೌಲಭ್ಯಗಳನ್ನು ಪಡೆಯಲು ಜನ ಮುಂದಾಗಬೇಕು ಎಂದರು.
ಗ್ರಾಮ ಪಂಚಾಯ್ತಿ ಹಿರಿಯ ಸದಸ್ಯ ಬಿ.ಎನ್.ಪರಮೇಶ್ ಮಾತನಾಡುತ್ತಾ ಗ್ರಾಮಗಳಲ್ಲಿ ವಿದ್ಯುತ್ ದೀಪಗಳು ಬೆಳಗಿನ ವೇಳೆಯಲ್ಲಿಯೇ ಬೆಳಗುತ್ತಿದ್ದು ಅವುಗಳನ್ನು ನಂದಿಸಲು ಎಲ್ಲರೂ ಸಹಕಾರ ನೀಡಬೇಕು. ಇದರಿಂದ ಪಂಚಾಯ್ತಿ ನಷ್ಚ ತಪ್ಪಿಸಬಹುದು. ಎಂದರು.ಸಭೆಯಲ್ಲಿ ಕಂದಾಯ ಇಲಾಖೆ ರೇಷ್ಮೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳೆ ಮಕ್ಕಳ ಇಲಾಖೆ, ಶಿಕ್ಷಣ ಇಲಾಖೆ, ಕೃಷಿ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು.
ಸಹಾಯಕ ನಿರ್ದೇಶಕ ತಿಮ್ಮಪ್ಪ, ಗ್ರಾಮೀಣ ಅಭಿವೃದ್ಧಿ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು. ನೆಲಮಂಗಲ ತಾಪಂ ಅಧ್ಯಕ್ಷ ಪುಟ್ಟಗಂಗಯ್ಯ, ತಾಪಂ ಸದಸ್ಯೆ ಹನುಮಕ್ಕ ವೆಂಕಟೇಶ್, ಗ್ರಾಪಂ ಉಪಾಧ್ಯಕ್ಷೆ ಚಂದ್ರಕಲಾಬಾಯಿ, ಸದಸ್ಯರಾದ ಗಂಗಣ್ಣ, ನಾರಾಯಣ್, ಕಮಲಮ್ಮ,ಸೇವಾನಾಯ್ಕ, ಮುನಿರಾಜನಾಯ್ಕ, ಲಕ್ಷ್ಮಣಯ್ಯ, ಬಸವರಾಜಮ್ಮ,ಸಿದ್ದಯ್ಯ,ಸಹನ,ತಾಯಮ್ಮ, ಶಾಂತಮ್ಮ, ಪಿಡಿಒ ಮೋಹನ್ಕುಮಾರ್ ಕಾರ್ಯದರ್ಶಿ ಕೃಷ್ಣಪ್ಪ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

