ಬೆಂಗಳೂರು ಗ್ರಾಮಾಂತರ

'ಕಾಂಗ್ರೆಸ್ ಗೆಲವು'

Published On :

ಚನ್ನಪಟ್ಟಣ: ಮತೀಯ ಬಿಜೆಪಿ ಜೊತೆಗಿನ ಅಕ್ರಮ ಮೈತ್ರಿಯಿಂದಾಗಿ ಜೆಡಿಎಸ್ ವರ್ಚಸ್ಸು ಕಡಿಮೆಯಾಗಿದ್ದು ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲವು ಸಾಧಿಸಲಿದೆ ಎಂದು ಪೌರಾಡಳಿತ ಮತ್ತು ಅಲ್ಪಸಂಖ್ಯಾತ ಇಲಾಖೆ ಸಚಿವ ಖಮರುಲ್ ಇಸ್ಲಾಂ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಪರ ಚುನಾವಣಾ ಪ್ರಚಾರ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ದೇವೇಗೌಡ ಮತ್ತು ಕುಮಾರಸ್ವಾಮಿ ಗೊಂದಲದ ನಡೆಯಿಂದಾಗಿ ಬೇಸತ್ತ ಹಲವಾರು ಹಿರಿಯ ಮುಖಂಡರು ಕಾಂಗ್ರೆಸ್ ಬೆಂಬಲಿಸಲು ಮುಂದಾಗಿದ್ದಾರೆ ಎಂದರು.
ಬಲವಂತವಾಗಿ ಮೋದಿ ನಾಯಕತ್ವ: ಬಿಜೆಪಿಯ ಹಿರಿಯ ನಾಯಕರಿಗೆ ಮೋದಿಯಂತಹ ಕೋಮುವಾದಿಯನ್ನು ಪ್ರಧಾನಿ ಮಾಡಲು ಇಷ್ಟವಿಲ್ಲದಿದ್ದರೂ ಸಂಘಪರಿವಾರ ಬಲವಂತವಾಗಿ ಮೋದಿಯ ನಾಯಕತ್ವ ಹೇರಿದೆ ಎಂದರು.
ಮಾಜಿ ಶಾಸಕ ಸಾದತ್ ಆಲಿಖಾನ್ ಮಾತನಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಸಿ.ವೀರೇಗೌಡ, ಅಸ್ಮತ್‌ಪಾಷಾ ನಿಜಾಮಿ, ಶಕೀಲ್ ಮತ್ತಿತರರು ಉಪಸ್ಥಿತರಿದ್ದರು.
ಮೀಸಲಾತಿಗೆ ನೀತಿ ಸಂಹಿತೆ ಅಡ್ಡಿ
ಪೌರ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿಗೆ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗಿದ್ದು ಚುನಾವಣೆ ಮುಗಿಯುತ್ತಿದ್ದಂತೆ ಮೀಸಲಾತಿ ಪ್ರಕಟಿಸುವುದಾಗಿ ಸಚಿವ ಖಮರುಲ್ ಇಸ್ಲಾಂ ತಿಳಿಸಿದರು.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮೀಸಲಾತಿಯನ್ನು ಯಾವುದೇ ಪ್ರಭಾವಕ್ಕೆ ಒಳಗಾಗದೆ ನಿಯಮಾವಳಿ ಯಂತೆ ಸಿದ್ದಪಡಿಸಲಾಗುವುದು, ಪಾರದರ್ಶಕ ನಿಯಮವನ್ನು ಕಟ್ಟು ನಿಟ್ಟಾಗಿ ಪಾಲನೆ ಮಾಡುವುದಾಗಿ ತಿಳಿಸಿದರು. ಪೌರಾಡಳಿತ ಇಲಾಖೆಗೆ ಕಾಯಕಲ್ಪ ನೀಡಲು ಚಿಂತನೆ ನಡೆಸಿದ್ದು ತಮಿಳು ನಾಡು ಮಾದರಿಯಲ್ಲಿ ಪೌರಾಡಳಿತ ವ್ಯವಹಾರಗಳನ್ನು ನಿರ್ವಹಿಸಲು ಪ್ರತ್ಯೇಕ ಅಧಿಕಾರಿಯನ್ನು ಜಿಲ್ಲಾ ಮಟ್ಟದಲ್ಲಿ ನಿಯೋಜಿಸುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.