'ತಳ ಸಮುದಾಯ ಮುಖ್ಯವಾಹಿನಿಗೆ ಬರಲಿ'
ದೊಡ್ಡಬಳ್ಳಾಪುರ: ಸ್ವಯಂ ಪರಿಶ್ರಮದ ಮೂಲಕ ತಳಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ದೇವನಹಳ್ಳಿ ಶಾಸಕ ಪಿಳ್ಳಮುನಿಶಾಮಪ್ಪ ಕಿವಿಮಾತು ಹೇಳಿದರು.
ತಾಲೂಕಿನ ತೂಬಗೆರೆ ಹೋಬಳಿ ಕಲ್ಲುಕೋಟೆ ಗ್ರಾಮದಲ್ಲಿ ನಡೆದ ಮಾದಾರ ಚನ್ನಯ್ಯ ಮಹಾಸಭಾ ಗ್ರಾಮ ಶಾಖೆ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಸಮಾನತೆ ನಿವಾರಣೆಯಾಗಲಿ: ಅಸಮಾನತೆ ನಿವಾರಣೆಯಾಗದ ಹೊರತು ದೇಶದ ಸಾಮಾಜಿಕ ಮೌಲ್ಯಗಳ ರಕ್ಷಣೆ ಅಸಾಧ್ಯ. ನಮ್ಮ ದೇಶದ ಪ್ರಜಾಪ್ರಭುತ್ವಕ್ಕೆ ಅರ್ಥ ಬರಬೇಕಾದರೆ ಸಾಮಾಜಿಕ ಅಸ್ಪೃಶ್ಯತೆ ತೊಲಗಬೇಕು. ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ಯೋಜನೆಗಳನ್ನು ಉಪಯೋಗಿಸಿಕೊಳ್ಳಲು ಅರಿವಿನ ಕೊರತೆ ಇದೆ. ತಳಸಮುದಾಯದ ಪ್ರಜ್ಞಾವಂತರು ಅಂತಹ ಜನರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕಿದೆ. ನಮ್ಮ ಹಲವು ಸಮಾಜ ಸುಧಾರಕರು ಶಿಕ್ಷಣ ಮತ್ತು ಸಂಘಟನೆಯ ಮಹತ್ವವನ್ನೇ ಹೆಚ್ಚಾಗಿ ಪ್ರತಿಪಾದಿಸಿದರು ಎಂದು ವಿವರಿಸಿದರು.
ಪ್ರಗತಿಗೆ ಶಿಕ್ಷಣ ಅತ್ಯಗತ್ಯ: ದಲಿತ ವಿಮೋಚನಾ ಸೇನೆ ರಾಜ್ಯಾಧ್ಯಕ್ಷ ಮಾ.ಮುನಿರಾಜು ಮಾತನಾಡಿ, ಸಮಾಜದ ಪ್ರತಿ ಸಮುದಾಯಕ್ಕೂ ಶಿಕ್ಷಣ ಅಗತ್ಯ ಎಂಬುದು ಎಲ್ಲರಿಗೂ ಅರಿವಾಗಿದೆ. ತಳಸಮುದಾಯಗಳ ರಾಜಕೀಯ ಪಕ್ಷಗಳಿಗೆ ಓಟ್ಬ್ಯಾಂಕ್ಗಳಾಗುವುದನ್ನು ಮೊದಲು ತಪ್ಪಿಸಬೇಕು. ಸಾಮಾಜಿಕ ಸುಧಾರಣೆ ಕಾರ್ಯಕ್ರಮಗಳು ಭಾಷಣಕ್ಕೆ ಮಾತ್ರ ಸೀಮಿತ ಆಗಬಾರದು. ಶಿಕ್ಷಣ, ಸಂಘಟನೆ ಮತ್ತು ಹೋರಾಟದಿಂದ ದಲಿತ ಸಮುದಾಯಗಳು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದರು.
ಕೇಂದ್ರ ಉಕ್ಕು ಸಚಿವಾಲಯ ಗ್ರಾಹಕ ಸಮಿತಿ ಸದಸ್ಯ ಸಿ.ಜಿ.ನಾಗೇಶ್, ಮಾದಾರ ಚನ್ನಯ್ಯ ಮಹಾಸಭಾದ ತಾಲೂಕು ಅಧ್ಯಕ್ಷ ರಾಮಕೃಷ್ಣಯ್ಯ, ಕಾರ್ಯದರ್ಶಿ ಟಿ.ಡಿ.ಮುನಿಯಪ್ಪ, ಮಹಾಸಭಾ ಮುಖಂಡರಾದ ವೀರಸ್ವಾಮಿ, ಗಂಗರಾಜು ಶಿರವಾರ, ಗ್ರಾಪಂ ಮಾಜಿ ಸದಸ್ಯ ವೆಂಕಟೇಶ್, ಕಲ್ಲುಕೋಟೆ ಶಾಖೆ ಅಧ್ಯಕ್ಷ ಗಂಗರಾಜು ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

