'ದೇವರಾಜ ಅರಸು ಶೋಷಿತರ ದನಿ'
ಮಾಗಡಿ: ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಶೋಷಿತರ ದ್ವನಿಯಾಗಿದ್ದರು, ಭೂ ಸುಧಾರಣೆಯ ಹರಿಕಾರ ಎಂದು ಕೆಪಿಸಿಸಿ ಸದಸ್ಯ ಎ.ಮಂಜು ಗುಣಗಾನ ಮಾಡಿದರು. ಅವರು ಮಾಗಡಿ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಮಾಜಿ ಪ್ರಧಾನಿ ದಿ.ರಾಜೀವ್ಗಾಂಧಿ, ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಮಾಜಿ ಪ್ರಧಾನಮಂತ್ರಿ ದಿ. ರಾಜೀವ್ಗಾಂಧಿ ಅವರು ಸಹ ಭಾರತ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವಲ್ಲಿ ತಮ್ಮದೇ ಕನಸಿನ ಚಿಂತನೆ ಇಟ್ಟುಕೊಂಡಿದ್ದರು. ಇಂತಹ ಸಾಮಾಜಿಕ, ಆರ್ಥಿಕ ಸುಧಾರಣೆಗೆ ಗ್ರಾಮೀಣ ಬಡವರ ಬದುಕಿಗೆ ಜೀವನೋಲ್ಲಾಸ ತರಲು ಇಬ್ಬರು ಮಹಾನ್ ನಾಯಕರು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ ಎಂದರು. ಕಾಂಗ್ರೆಸ್ ಮುಖಂಡ ಬಿ.ವಿ.ಜಯರಾಂ ಮಾತನಾಡಿದರು.
ಪುರಸಭೆ ಮಾಜಿ ಅಧ್ಯಕ್ಷ ಪಿ.ವಿ.ಸೀತಾರಾಂ, ರಂಗಹನುಮಯ್ಯ, ಟಿ.ಭೋಗೇಶ್, ಕಲ್ಪನಾಶಿವಣ್ಣ, ಪುರಸಭಾ ಸದಸ್ಯರಾದ ಎಂ.ಎನ್.ಮಂಜುನಾಥ್, ಕೆ.ವಿ. ಬಾಲು, ಹೊಸಪೇಟೆ ಚಂದ್ರಯ್ಯ, ಎನ್.ಗಂಗಯ್ಯ, ರಹಮತ್, ನಯಾಜ್,ರಂಗಸ್ವಾಮಿ, ಬೆಳಗವಾಡಿ ರಂಗನಾಥ್ ಇತರರು ಇದ್ದರು.
ಮಾಜಿ ಸಿಎಂ ಅರಸು ಸನಿನೆನಪು
ದೇವನಹಳ್ಳಿ ದೇವನಹಳ್ಳಿ ತಾಲೂಕು ಹಿಂದುಳಿದ ಜಾತಿಗಳ ಒಕ್ಕೂಟದ ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮದಿನಾಚರಣೆ ಸಮಾರಂಭವನ್ನು ಇಲ್ಲಿನ ಗುರುಭವನದಲ್ಲಿ ಆಯೋಜಿಸಿದ್ದರು.
ದಲಿತ ಸಂಘಟನೆಗಳ ಜಿಲ್ಲಾ ಸಂಚಾಲಕ ಕಾರಹಳ್ಳಿ ಶ್ರೀನಿವಾಸ್ ಮಾತನಾಡಿ, ಹಿಂದುಳಿದ ಜಾತಿಗಳ ಒಕ್ಕೂಟ ಅರಸು ನೆನಪು ಮಾಡುತ್ತಿರುವುದು ಅಭಿನಂದನೀಯ ಎಂದರಲ್ಲದೆ ದೇವರಾಜ ಅರಸು ಹುಣಸೂರು ಬಳಿಯ ಕುಗ್ರಾಮ ಕಲ್ಲಹಳ್ಳಿಯಲ್ಲಿ ಬಡ ಕುಟುಂಬದಲ್ಲಿ ಹುಟ್ಟಿ ಮೈಸೂರಿನಲ್ಲಿ ಪದವಿ ಪಡೆದ ನಂತರವೂ ತಮ್ಮ ಗ್ರಾಮದಲ್ಲಿ ಕೃಷಿಕರಾಗಿ ಜೀವನ ಸಾಗಿಸಿ ನಂತರ 1952 ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿ ನಂತರ ರಾಜಕೀಯ ಪ್ರವೇಶ ಪಡೆದು ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ನಂತರರ ಮುಖ್ಯಮಂತ್ರಿಗಳಾಗಿ ಪ್ರಮುಖವಾಗಿ ಉಳುವವನಿಗೆ ಭೂಮಿ ಯೋಜನೆ ಕಾಯಿದೆ ಜಾರಿಗೆ ತಂದು ಲಕ್ಷಾಂತರ ಎಕರೆ ಉಳುವವನ ಪಾಲಾಗುವಂತೆ ಮಾಡಿದರು. ಇವರ ಅವಧಿಯಲ್ಲಿ ಕರ್ನಾಟಕ ರಾಜ್ಯ ನಾಮಕರಣವಾಯಿತು ಎಂದರು.
ಶಿಕ್ಷಕರಾದ ಶ್ರೀರಾಮಯ್ಯ, ಕೇಶವಮೂರ್ತಿ ಮತ್ತಿತರರು ಈ ಸಂದರ್ಭದಲ್ಲಿ ಮಾತನಾಡಿದರು. ಒಕ್ಕೂಟದ ಅಧ್ಯಕ್ಷ ಮುನಿಶಾಮಪ್ಪ ಅಧ್ಯಕ್ಷತೆ ವಹಿಸಿದ್ದರು, ಎನ್.ರವಿಕುಮಾರ್, ಸಿ.ಎಂ.ವೆಂಕಟೇಶ್, ಪುರಸಭಾ ಸದಸ್ಯರಾದ ಬೇಕರಿ ಮಂಜುನಾಥ್, ಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.
ಭಗತ್ಸಿಂಗ್ ನೆನಪಲ್ಲಿ ರಕ್ತದಾನ ಶಿಬಿರ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಘಟಕದ ನೇತೃತ್ವದಲ್ಲಿ ಮಹಾನ್ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ಸಿಂಗ್ ನೆನಪಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಇಲ್ಲಿನ ಕನ್ನಡ ಜಾಗೃತ ಭವನದಲ್ಲಿ ನಡೆಯಿತು.
ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ದೇಶಭಕ್ತ ಭಗತ್ಸಿಂಗ್ರ ನೆನಪಿನಲ್ಲಿ ಬಿಜೆಪಿಯ ವಿವಿಧ ಘಟಕಗಳ ಒಗ್ಗೂಡಿ ಒಂದು ಉತ್ತಮ ಕೆಲಸವನ್ನು ಮಾಡುತ್ತಿವೆ.
ರಕ್ತದಾನ ದಾನಗಳಲ್ಲೇ ಅತ್ಯಂತ ಶ್ರೇಷ್ಠ ದಾನ ಎನಿಸಿದೆ. ಈ ನಿಟ್ಟಿನಲ್ಲಿ ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನದಲ್ಲಿ ತೊಡಗಿಕೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದರು. ರೇಷ್ಮೆ ಮಾರಾಟ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ಮಾತನಾಡಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್, ಮಾಜಿ ಉಪಾಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ, ಬಿಜೆಪಿ ತಾಲೂಕು ಅಧ್ಯಕ್ಷ ಅಶ್ವತ್ಥನಾರಾಯಣಗೌಡ, ನಗರಾಧ್ಯಕ್ಷ ಎಚ್.ಎಸ್.ಶಿವಶಂಕರ್, ಮುಖಂಡರಾದ ಗೋಪಿ, ಡಿ.ಎಲ್.ಸತ್ಯನಾರಾಯಣ್, ಆವಲಕೊಂಡಪ್ಪ, ಮಹದೇವ್, ನಾಗರಾಜ್ ಸೇರಿದಂತೆ ವಿವಿಧ ಘಟಕಗಳ ಅನೇಕ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತನಿಧಿ ನೇತೃತ್ವದಲ್ಲಿ ದಾನಿಗಳಿಂದ ರಕ್ತ ಸಂಗ್ರಹಿಸಲಾಯಿತು. ಇದೆ ಸಂದರ್ಭದಲ್ಲಿ ರಕ್ತದಾನಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

