ವಿಜಯಪುರ: ಶಿಕ್ಷಕರ ತರಬೇತಿ
ವಿಜಯಪುರ: ಮುಂದಿನ ದಿನಗಳಲ್ಲಿ ಮಕ್ಕಳ ಪಠ್ಯೇತರ ಚಟುವಟಿಕೆಯ ಜೊತೆ ಜೊತೆಗೆ ಅವರ ವರ್ತನೆ ಅನುಗುಣವಾಗಿ ಅಂಕಗಳನ್ನು ನೀಡಬೇಕು ಎಂದು ಜಿಲ್ಲಾ ಉಪ ನಿರ್ದೇಶಕ ಕಚೇರಿ ಶಿಕ್ಷಣಾಧಿಕಾರಿ ನಾಗರತ್ನಮ್ಮ ತಿಳಿಸಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ
ದೇವನಹಳ್ಳಿ ಮತ್ತು ಹೊಸಕೋಟೆ ತಾಲೂಕುಗಳ ಸಮಾಜ ವಿಜ್ಞಾನ ಶಿಕ್ಷಕರಿಗೆ ನಿರಂತರ ಮತ್ತು ವ್ಯಾಪಕ ಮೌಲ್ಯ ಮಾಪನ ವಿಷಯದ ಕುರಿತು ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು. ಈ ಯೋಜನೆಯು ತಡವಾಗಿ ಅನುಷ್ಠಾನವಾಗುತ್ತಿದೆ ಈ ಸೂಚನೆಗಳನ್ನುಶಿಕ್ಷಕರು ಸೂಕ್ತ ರೀತಿಯಲ್ಲಿ ಅನುಸರಿಸಬೇಕು. ಮಾಧ್ಯಮಿಕ ಶಿಕ್ಷಣ ಅಭಿಯಾನದಡಿಯಲ್ಲಿರುವ ಯೋಜನೆಯಾಗಿದ್ದು ಶಿಕ್ಷಕರು ತರಬೇತಿ ಪಡೆದು ಮಕ್ಕಳ ಉತ್ತಮ ಫಲಿತಾಂಶಕ್ಕೆ ಸಂಪೂರ್ಣವಾಗಿಶ್ರಮಿಸಬೇಕು ಎಂದರು.ಇಲ್ಲಿಯ ತನಕ ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ತರುವುದು ಪ್ರಾಥಮಿಕದಲ್ಲಿ ಮಾತ್ರ ನಡೆಯುತ್ತಿತ್ತು. ಇನ್ನೂ ಮುಂದೆ ಪ್ರೌಡಶಾಲೆಗಳಲ್ಲೂ ಗಮನಹರಿಸಬೇಕು ಹಾಗೂ ಹದಿಹರೆಯದ
ಮಕ್ಕಳು ಅಪ್ತ ಸಮಾಲೋಚನೆಯ ಮೂಲಕ ಸರಿದಾರಿಗೆ ತರುವ ಪ್ರಯತ್ನಗಳು ನಡೆಯಬೇಕಿದೆ ಎಂದರು.
ಉಪ ಪ್ರಾಂಶುಪಾಲ ಜಿ.ರಾಮಚಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ,ಬದಲಾಗುತ್ತಿರುವ ಪರಿಸ್ಥಿತಿಗನುಗುಣವಾಗಿ ಶಿಕ್ಷಣ ಕ್ಷೇತ್ರದ ಗುಣಮಟ್ಟ ಹೆಚ್ಚಿಸಲು ಇಲಾಖೆ ಯೋಜನೆಗಳನ್ನು ರೂಪಿಸಿದೆ.ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ಲೋಕೇಶ್ ಸೇರಿದಂತೆ ಮತ್ತಿತರರು, ವಿಷಯ ಪರಿವೀಕ್ಷಕ ಮಹದೇವ್ ಕಾರ್ಯಾಗಾರದಲ್ಲಿ ತರಬೇತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

