ಶಿಕ್ಷಕರಿಗೆ ಮೌಲ್ಯಮಾಪಕ ತರಬೇತಿ
ದೇವನಹಳ್ಳಿ: ದೇವನಹಳ್ಳಿ ಮತ್ತು ಹೊಸಕೋಟೆ ತಾಲೂಕುಗಳ ಪ್ರೌಢಶಾಲಾ ಕನ್ನಡ ಭೋಧನೆ ಮಾಡುವ 110 ಮಂದಿ ಶಿಕ್ಷಕರಿಗಾಗಿ ನಿರಂತರ ಮತ್ತು ವ್ಯಾಪಕ ಮೌಲ್ಯ ಮಾಪಕ ತರಬೇತಿ ಕಾರ್ಯಾಗಾರವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಗ್ರಾಮಾಂತರ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಇಲ್ಲಿನ ಸೂಲಿಬೆಲೆ ರಸ್ತೆಯಲ್ಲಿರುವ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿತ್ತು.
ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮಾಂತರ ಪ್ರೌಢಶಾಲೆ ಮುಖ್ಯ ಶಿಕ್ಷಕ ಬಿ.ಎನ್. ಕೃಷ್ಣಪ್ಪ ಮಾತನಾಡಿ, ಶಿಕ್ಷಕರಾದವರಿಗೆ ಕಲಿಯುವಿಕೆ ಮತ್ತು ಮೌಲ್ಯಮಾಪನ ನಿರಂತರವಾಗಿರುತ್ತದೆ ಕಲಿಕೋಪಕರಣಗಳನ್ನು ಹೇಗೆ ಸಮರ್ಪಕವಾಗಿ ಬಳಕೆ ಮಾಡಬೇಕು ಎಂಬುದನ್ನು ಸಂಪನ್ಮೂಲ ವ್ಯಕ್ತಿಗಳಿಂದ ತಿಳಿದುಕೊಳ್ಳಬೇಕು ಎಂದರು. ಬೂದಿಗೆರೆ ಪ್ರೌಢಶಾಲೆ ಮುಖ್ಯ ಶಿಕ್ಷಕ ವೈ.ಎನ್.ಕೃಷ್ಣಮೂರ್ತಿಮಾತನಾಡಿ, ಶಿಕ್ಷಕರಾದವರು ತಮ್ಮ ಭೋಧನಾ ವಿಷಯದ ಬಗ್ಗೆ ಆಳವಾದ ಅಧ್ಯಯನ ಮುಖ್ಯವಾಗಿರುತ್ತದೆ ಎಂತಹ ಸಮಸ್ಯೆ ಇದ್ದರೂ, ವಿಷಯ ಪರಿವೀಕ್ಷಕರಿಂದ ಬಗೆಹರಿಸಿಕೊಳ್ಳಬೇಕು ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕರಾದ ಶಾರದಮ್ಮ, ಪ್ರವೀತ ಆದೋನಿ, ಬೆಟ್ಟಕೋಟೆ ಶಾಲೆಯ ಮುಖ್ಯ ಶಿಕ್ಷಕರಾದ ಜಿ.ಎ.ಚಂದ್ರಶೇಖರ್, ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

