ಕ.ಪ್ರ.ವಾರ್ತೆ ನೆಲಮಂಗಲ ಆ. 21-
ತಾಲೂಕಿನ ತ್ಯಾಮಗೊಂಡ್ಲು ಹೋಬಳಿ ವ್ಯಾಪ್ತಿಯ ಮಣ್ಣೆ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಅಭಾವದಿಂದ ಬೇಸತ್ತ ಗ್ರಾಮಸ್ಥರು ಪಂಚಾಯ್ತಿಗೆ ಎಷ್ಟೇ ದೂರು ಮನವಿ ನೀಡಿದರು ಪ್ರಯೋಜನವಾಗುತ್ತಿಲ್ಲ ಎಂದು ಪಂಚಾಯ್ತಿ ಮುಂದೆ ಖಾಲಿ ಬಿಂದಿಗೆ ಪ್ರದರ್ಶಿಸಿ ಬುಧವಾರ ಪ್ರತಿಭಟನೆ ನಡೆಸಿದರು.
ಕಳೆದ 6 ತಿಂಗಳಿಂದಲೂ ಕುಡಿಯುವ ನೀರಿನ ಬವಣೆ ಅನುಭವಿಸುತ್ತಿದ್ದೇವೆ. ಗ್ರಾಮ ಪಂಚಾಯ್ತಿ ವತಿಯಿಂದ ನೀರಿನ ವ್ಯವಸ್ಥೆ ಮಾಡಿಕೊಡಿ ಎಂದು ಕಳೆದ 2 ತಿಂಗಳ ಹಿಂದೆಯೇ ಮನವಿ ಮಾಡಿಕೊಂಡರು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಈ ಮನವಿಗೆ ಸ್ಪಂಧಿಸದೇ ಹಲವು ಕಾರಣ ನೀಡುತ್ತಲೆ ಬರುತ್ತಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿ ಆ ಅಧಿಕಾರಿಯ ಕಾರ್ಯವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾರೆ.