ಬೆಂಗಳೂರು ಗ್ರಾಮಾಂತರ

ಛಾಯಾಚಿತ್ರ ಪ್ರದರ್ಶನ

Published On :

ದೊಡ್ಡಬಳ್ಳಾಪುರ: ಇಲ್ಲಿನ ತಾಲೂಕು ಫೋಟೋ ಮತ್ತು ವೀಡಿಯೋ ಛಾಯಾಗ್ರಾಹಕರ ಸಂಘದ ನೇತೃತ್ವದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಿತು.  
 ಕಾರ್ಯಕ್ರಮವನ್ನು ಖ್ಯಾತಿಯ ಛಾಯಾಗ್ರಾಹಕ ಜೆ.ಕೆಂಪಣ್ಣ ಉದ್ಘಾಟಿಸಿದರು.  
 ಈ ಸಂದರ್ಭದಲ್ಲಿ ಮಾತನಾಡಿದ ಅವರು, ಛಾಯಾಗ್ರಹಣ ಒಂದು ವೃತ್ತಿಗೂ ಮೀರಿದ ಸೃಜನಶೀಲ ಕಲೆ.
ಈ ನಿಟ್ಟಿನಲ್ಲಿ ಛಾಯಾಗ್ರಾಹಕ ವೃತ್ತಿಗಷ್ಟೇ ಸೀಮಿತವಾಗದೆ ತಮ್ಮ ಕಲಾತ್ಮಕ ಪ್ರವೃತ್ತಿ ದುಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕಿವಿಮಾತು ಹೇಳಿದರು.    
  ರಾಜ್ಯ ಛಾಯಾಗ್ರಾಹಕರ ಸಂಘದ ಉಪಾಧ್ಯಕ್ಷ ಎಚ್.ಎಸ್.ನಾಗೇಶ್, ನಿರ್ದೇಶಕ ಸಂಪತ್‌ಕುಮಾರ್, ನಗರಸಭೆ ಸದಸ್ಯ ಟಿ.ಎನ್.ಪ್ರಭುದೇವ್, ವಿ.ಎಸ್.ರವಿಕುಮಾರ್, ಕೆ.ಜಿ.ರಘುರಾಂ, ಮಹಿಳಾ ಸಮಾಜದ ಅಧ್ಯಕ್ಷೆ ದೇವಕಿ, ತಾಲೂಕು ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಬಸವರಾಜಯ್ಯ, ಗೌ.ಅಧ್ಯಕ್ಷ ಪಿಳ್ಳವೆಂಕಟಪ್ಪ, ಉಪಾಧ್ಯಕ್ಷ ರಾಜು ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.