ಕೃಷ್ಣ ಜನ್ಮಾಷ್ಟಮಿ; ವಿವಿಧ ಸ್ಪರ್ಧೆ
ಮಾಗಡಿ: ಕಡೆಯ ಶ್ರಾವಣ ಶನಿವಾರದ ಪ್ರಯುಕ್ತ ಐತಿಹಾಸಿಕ ಪ್ರಸಿದ್ಧ ತಿರುಮಲೆ ರಂಗನಾಥಸ್ವಾಮಿ ಮುಡಿಗೆ ವಜ್ರ ಖಚಿತ ಚಿನ್ನದ ಕಿರೀಟಧಾರಣೆ ಮಾಡಲಾಗುವುದು ಹಾಗು ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆಯೋಜಿಸಿರುವುದಾಗಿ ಶ್ರೀರಂಗ ಸೇವಾ ಟ್ರಸ್ಟ್ ಅಧ್ಯಕ್ಷ ಟಿ.ಎಸ್. ಸತೀಶ್ ತಿಳಿಸಿದ್ದಾರೆ. ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವೇಣುಗೋಪಾಲಸ್ವಾಮಿ ದೇವರಿಗೆ ವಿಶೇಷ ಅಲಂಕಾರ ಧಾರ್ಮಿಕ ಪೂಜಾ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದರು.
ಸ್ಪರ್ಧೆಗಳು: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಕ್ಕಳಿಗೆ ಭಗವದ್ಗೀತೆ ವಾಚನ, ಭಜನೆ, ಕೀರ್ತನೆ, ಕೃಷ್ಣ ವೇಷ ಸ್ಪರ್ಧೆ, ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಮತ್ತು ಯುವಕರಿಗೆ ಮೊಸರು ಕುಡಿಕೆ ಹೊಡೆಯುವ ಸ್ಪರ್ಧೆ ಏರ್ಪಡಿಸಿದ್ದು, ಆಸಕ್ತರು ಭಾಗವಹಿಸಬಹುದು. ಮಾಹಿತಿಗಾಗಿ ಮೊ.9448592285, 9448532027 ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.
ರಾಯರ ಆರಾಧನಾ ಮಹೋತ್ಸವ
ನೆಲಮಂಗಲ: ಪಟ್ಟಣದ ತಲಕಾಡು ಸುಬ್ಬರಾಯರ ಬೀದಿಯಲ್ಲಿರುವ ರಾಘವೇಂದ್ರಸ್ವಾಮಿ ಮಠದಲ್ಲಿ ರಾಘವೇಂದ್ರ ಸೇವಾ ಸಮಿತಿ ವತಿಯಿಂದ ರಾಘವೇಂದ್ರ ಸ್ವಾಮಿಗಳ 342ನೇ ಆರಾಧನಾ ಮಹೋತ್ಸವವನ್ನು ವಿಜೃಂಭಣೆಯಿಂದ 2 ಸಾವಿರಕ್ಕೂ ಹೆಚ್ಚು ಜನ ಭಕ್ತರ ಸಮ್ಮುಖದಲ್ಲಿ ಗುರುವಾರ ನೆರವೇರಿಸಿದರು.
ಬೆಳಗ್ಗೆಯಿಂದ ಪಂಚಾಮೃತ ಅಭಿಷೇಕ, ಪಾದಪೂಜೆ, ಕನಕಾಭಿಷೇಕಾದಿ ಪೂಜೆಗಳನ್ನು ನೆರವೇರಿಸಿ ವಿನಾಯಕ ಭಜನ ಮಂಡಳಿಯಿಂದ ಭಜನಾ ಕಾರ್ಯಕ್ರಮ ನೆರವೇರಿಸಿದರು. ನಂತರ ಪದ್ದತಿಯಂತೆ 5 ಜನ ಶ್ರೇಷ್ಟ ಶ್ರೀ ರಾಘವೇಂದ್ರ ಗುರುಗಳ ಭಕ್ತರಿಗೆ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಣೆ ಸಲ್ಲಿಸುವ ಮೂಲಕ ಗುರುಗಳನ್ನು ಅವರಲ್ಲಿ ಕಂಡರು. ಗುರುಗಳ ದರ್ಶನಕ್ಕೆ ಪಟ್ಟಣದ ಎಲ್ಲಾ ಕುಟುಂಬದವರು ಕುಟುಂಬ ಸಮೇತರಾಗಿ ಆಗಮಿಸಿ ದೇವರಿಗೆ ಪೂಜೆ ಸಲ್ಲಿಸಿ ದರ್ಶನ ಭಾಗ್ಯ ಪಡೆದು ಪ್ರಸಾದ ಸ್ವೀಕರಿಸುವ ದೃಶ್ಯ ಕಂಡು ಬಂತು.
ಸಾಹಿತಿ ವಿಜೆಯೇಂದ್ರರಾವ್ ದೇವರ ದರ್ಶನ ಭಾಗ್ಯ ಪಡೆದರು. ರಾಘವೇಂದ್ರ ಸೇವಾ ಸಮಿತಿ ಪೂಜೆ ನೇತೃತ್ವ ವಹಿಸಿಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

