ಆಟೋ ಚಾಲಕರ ಸಂಘದವರಿಂದ ರಾಜ್ಯೋತ್ಸವ
ದೇವನಹಳ್ಳಿ: ಇಲ್ಲಿನ ಹಳೇ ಬಸ್ ನಿಲ್ದಾಣದ ಜೈ ಭುವನೇಶ್ವರಿ ಆಟೋ ಚಾಲಕರ ಮತ್ತು ಮಾಲೀಕರ ಸಂಘದವರಿಂದ 15ನೇ ವರ್ಷದ ಕನ್ನಡ ರಾಜ್ಯೋತ್ಸವ ಹಾಗೂ ಅಂಧ ಮಕ್ಕಳಿಗೆ ಸಮವಸ್ತ್ರ, ಪುಸ್ತಕಗಳ ವಿತರಣಾ ಸಮಾರಂಭ ದಿವಂಗತ ಎಸ್ಎಲ್ಎನ್ ಕುಮಾರ್ ಮಂಟಪದಲ್ಲಿ ಆಯೋಜಿಸಿದ್ದರು.
ಉದ್ಘಾಟನೆಯನ್ನು ಬಯಪ ಮಾಜಿ ಅಧ್ಯಕ್ಷ ಸಿ. ಅಶ್ವತ್ಥನಾರಾಯಣ್ ನೆರವೇರಿಸಿ ಆಟೋ ಚಾಲಕರು ತಮ್ಮ ದಿನ ನಿತ್ಯದ ದುಡಿಮೆಯಲ್ಲಿಯೂ ಹಣ ಉಳಿಸಿ ಮಕ್ಕಳಿಗೆ ಸಮವಸ್ತ್ರ ಹಾಗೂ ಬಟ್ಟೆಗಳ ವಿತರಣೆಯೊಂದಿಗೆ ರಾಜ್ಯೋತ್ಸ ಆಚರಿಸುತ್ತಿರುವುದು ಅಭಿನಂದನೀಯ. ಕನ್ನಡ ನಾಡಿನಲ್ಲಿರುವ ಎಲ್ಲ ಕನ್ನಡಿಗರು ತಮ್ಮ ಮಾತೃಭಾಷೆ, ನೆಲ ಜಲ ಸಂಸ್ಕೃತಿ ಪರಂಪರೆಗೆ ಗೌರವ ಕೊಡಬೇಕು, ಬೆಳೆಸಬೇಕು ಎಂದರು.
ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ. ಜಗನ್ನಾಥ್, ಪೊಲೀಸ್ ಇನ್ಸ್ಪೆಕ್ಟರ್ ಡಿ. ಮಂಜುನಾಥ್ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷ ಪುರಸಭಾ ಸದಸ್ಯ ಬಿ.ದೇವರಾಜ್ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ತಾಲೂಕು ಛಲವಾದಿ ಸಂಘದ ಅಧ್ಯಕ್ಷ ಕಾಳಪ್ಪನವರ ವೆಂಕಟೇಶ್, ವಾಲ್ಮೀಕಿ ಸಂಘದ ಕಾರ್ಯಾಧ್ಯಕ್ಷ ಎಸ್. ನಾಗೇಶಬಾಬು ಹಾಗೂ ಬಾಲು ಪ್ರಸಾದ್, ಪುರಸಭಾ ಸದಸ್ಯ ಬೇಕರಿ ಮಂಜುನಾಥ್ ಉಪಸ್ಥಿತರಿದ್ದರು. ಶಿಕ್ಷಕ ಬಿ.ಪುಟ್ಟಸ್ವಾಮಿ ಸ್ವಾಗತ ಕೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

