ಬೆಂಗಳೂರು ಗ್ರಾಮಾಂತರ

ಇಂಗ್ಲಿಷ್ ವ್ಯಾಮೋಹದಿಂದ ಆತಂಕ

Published On :

ಕನ್ನಡಪ್ರಭ ವಾರ್ತೆ, ದೊಡ್ಡಬಳ್ಳಾಪುರ,ಡಿ.1
ಗ್ರಾಮೀಣ ಪ್ರದೇಶದಲ್ಲಿ ಉಳಿದಿರುವ ಕನ್ನಡ ಭಾಷೆಯೂ ಇಂದು ಇಂದು ಆಂತಕಕ್ಕೀಡಾಗಿದೆ. ಇಂಗ್ಲಿಷ್ ವ್ಯಾಮೋಹ ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚಾಗುತ್ತಿರುವುದರಿಂದ ಸ್ಥಳೀಯ ಸಂಸ್ಕೃತಿ ಮರೆಯಾಗುತ್ತಿದೆ ಎಂದು ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಹೇಳಿದರು.
ತಾಲೂಕಿನ ಹಣಬೆ ಗ್ರಾಮದಲ್ಲಿನ ಶ್ರೀನೇತಾಜಿ ಗ್ರಾಮಾಭಿವೃದ್ಧಿ ಯುವಕ ಸಂಘದಿಂದ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಭಾಷಾಭಿಮಾನ ಎಲ್ಲರಲ್ಲೂ ಮೂಡಿದಾಗ ಮಾತ್ರ ಕನ್ನಡ ಭಾಷೆ ಸಮೃದ್ಧವಾಗಲು ಸಾಧ್ಯ. ಇಂದು ಕನ್ನಡ ಹಲವು ಸಮಸ್ಯೆ-ಸವಾಲುಗಳನ್ನು ಎದುರಿಸಬೇಕಿದೆ. ಚಲನಚಿತ್ರಗಳು ಕೂಡ ಮನೆಮಂದಿಯೆಲ್ಲ ಕುಳಿತು ನೋಡುವ ರೀತಿಯಲ್ಲಿ ಬರುತ್ತಿಲ್ಲ. ಭಾಷೆ ನಶಿಸುತ್ತಿದೆ ಎಂಬುದು ವಿಷಾದನೀಯ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ ಮಾತನಾಡಿ ಕನ್ನಡವನ್ನು ಎಲ್ಲ ಹಂತಗಳಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕಿದೆ. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಒಟ್ಟುಗೂಡಿ ಕೆಲಸ ಮಾಡಬೇಕು. ಆಗ ಮಾತ್ರ ರಾಜ್ಯೋತ್ಸವ ಕಾರ್ಯಕ್ರಮಗಳು ಅರ್ಥಪೂರ್ಣವಾಗುತ್ತವೆ ಎಂದರು.
ಚಿತ್ರನಟ ಧ್ರುವ ಸರ್ಜಾ ಮಾತನಾಡಿ ಕನ್ನಡಿಗರು ಕನ್ನಡ ಭಾಷೆಯನ್ನು ಪ್ರೀತಿಸಬೇಕು. ಕನ್ನಡ ಚಲನಚಿತ್ರಗಳನ್ನು ನೋಡುವ ಮೂಲಕ ಪ್ರೋತ್ಸಾಹಿಸಬೇಕು. ಇದರಿಂದಾಗಿ ಕನ್ನಡತನ ಬೆಳೆಯುತ್ತದೆ. ಕಲಾವಿದರನ್ನು ಬೆಳೆಸಿದಂತಾಗುತ್ತದೆ ಎಂದರು.
ಕಿಮ್ಸ್ ಮಾಜಿ ಅಧ್ಯಕ್ಷ ಬಿ.ಮುನೇಗೌಡ, ವಿಎಸ್‌ಎಸ್‌ಎನ್ ಅಧ್ಯಕ್ಷ ನಾರಾಯಣ್, ಕಾರ್ಯದರ್ಶಿ ಶ್ರೀನಿವಾಸ್, ಗ್ರಾಮ ಪಂಚಾಯಿತಿ ಸದಸ್ಯ ಶ್ರೀವತ್ಸ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಚುಂಚೇಗೌಡ, ಮುಖಂಡರಾದ ಆರ್.ಜಿ.ಶ್ರೀನಿವಾಸ್, ರವಿ, ರಾಮಲಿಂಗಯ್ಯ, ವಕೀಲ ಸಿದ್ಧರಾಮಯ್ಯ, ಶ್ರೀನೇತಾಜಿ ಗ್ರಾಮಾಭಿವೃದ್ಧಿ ಯುವಕ ಸಂಘದ ಹರೀಶ್ ಮತ್ತಿತರರು ಭಾಗವಹಿಸಿದ್ದರು.
ರಕ್ತದಾನ ಶಿಬಿರ: ಇದೇ ಸಂದರ್ಭದಲ್ಲಿ ದೊಡ್ಡಬಳ್ಳಾಪುರದ ಶ್ರೀರಾಮ ಆಸ್ಪತ್ರೆಯ ವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಗ್ರಾಮದ ಹಲವಾರು ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಅಭಿನೇತ್ರಿ ಸಾಂಸ್ಕೃತಿಕ ಸಂಘ ಮತ್ತು ಸ್ಥಳೀಯ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.