600 ಕೋಟಿ ಹಗರಣ: ತಾರ್ಕಿಕ ಅಂತ್ಯದವರೆಗೂ ಹೋರಾಟ
ಮಾಗಡಿ: ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದ್ದ 600 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರಿಂದ 175 ಕೋಟಿ ರು. ಗಳನ್ನು ಸರ್ಕಾರಕ್ಕೆ ವಾಪಸು ಪಾವತಿಸಿದ್ದೇವೆ. ಬಾಕಿ ಇರುವ ಇನ್ನೂ 25 ಕೋಟಿ ರು.ಗಳನ್ನು ಕಟ್ಟಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಕೆಪಿಸಿಸಿ ಸದಸ್ಯ ಎ.ಮಂಜು ತಿಳಿಸಿದರು.
ಅವರು ಮಾಗಡಿ ತಾಲೂಕಿನ ಹೂಜೇನಹಳ್ಳಿಯಲ್ಲಿ ಕೊಲ್ಲಾಪುರದಮ್ಮ ಯುವಕರ ಬಳಗ ಏರ್ಪಡಿಸಿದ್ದ ಪ್ರಥಮ ವರ್ಷದ ಅದ್ಧೂರಿ ಕನ್ನಡ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ ಹಾಗೂ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡುತ್ತಾ ತಾಲೂಕಿನ ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳು 10 ಕೋಟಿ ಬಿಡುಗಡೆ ಮಾಡುವಂತೆ ಸಂಸದ ಡಿ.ಕೆ.ಸುರೇಶ್ ಪತ್ರ ಬರೆದು ಮನವಿ ಮಾಡಿದ್ದಾರೆ. ತಾಲೂಕಿನ ಪ್ರತಿ ಗ್ರಾ.ಪಂಗೆ ಕನಿಷ್ಠ 25 ಲಕ್ಷ ರು. ಅಗತ್ಯವಿದೆ ಎಂದರಲ್ಲದೆ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಿ, ಜತೆಗೆ ಗ್ರಾಮದ ಪುರಾತನ ದೇವಾಲಯಗಳ ಜೀಣೋದ್ಧಾರ, ಗ್ರಾಮ ನೈರ್ಮಲ್ಯ, ಕೆರೆ ಕಟ್ಟೆಗಳ ಅಭಿವೃದ್ಧಿಗೆ ಯುವಕರು ಮುಂದಾಗಬೇಕು ಎಂದು ಕರೆ ನೀಡಿದರು.
ನಾಚಿಕೆಗೇಡಿನ ಸಂಗತಿ: ಕ್ಷೇತ್ರಕ್ಕೆ ಹೇಮಾವತಿ ನೀರು ಹರಿಯುವುದಿಲ್ಲ ಎನ್ನುತ್ತಿದ್ದವರೀಗ ಶಾಶ್ವತ ಹೇಮಾವತಿ ನೀರಾವರಿ ಯೋಜನೆ ಹೋರಾಟಕ್ಕೆ ನಾವು ಕೈ ಜೋಡಿಸುವುದಾಗಿ ಹೇಳಿಕೊಳ್ಳುತ್ತಿರುವ ಕೆಲ ನಾಯಕರಿಗೆ ನಾಚಿಕೆಯಾಗಬೇಕು ಎಂದು ಕೆಪಿಸಿಸಿ ಸದಸ್ಯ ಎ.ಮಂಜು ಪರೋಕ್ಷವಾಗಿ ಜೆಡಿಎಸ್ ನಾಯಕರನ್ನು ಟೀಕಿಸಿದರು.
ಗ್ರಾಮದ ಹಿರಿಯ ಹಾಗೂ ಕಾಂಗ್ರೆಸ್ ಮುಖಂಡ ಸ್ವಾಮಿ ಕನ್ನಡ ರಾಜ್ಯೋತ್ಸವ ಕುರಿತು ಮಾತನಾಡಿದರಲ್ಲದೆ ಗ್ರಾಮದ ಅಭಿವೃದ್ಧಿಗೆ ಅನುದಾನ ಮಂಜೂರಾತಿ ಮಾಡಿಸುವಂತೆ ಕೆಪಿಸಿಸಿ ಸದಸ್ಯ ಎ.ಮಂಜು ಅವರಲ್ಲಿ ಮನವಿ ಮಾಡಿಕೊಂಡರು. ರಾಜ್ಯೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಪಟಾಕಿ ಸಿಡಿಸಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಿಸಿ ಸಂಭ್ರಮಿಸಿದರು.
ಪುರಸಭಾ ಸದಸ್ಯ ಎಂ.ಎನ್. ಮಂಜುನಾಥ್, ಕೆ.ವಿ. ಬಾಲು, ಮುಖಂಡರಾದ ಕೆಂಚೇಗೌಡ, ಎಂ.ಸಿ. ವೆಂಕಟೇಶ್, ಮುನಿಭೈರಪ್ಪ, ಚಂದ್ರಪ್ಪ, ರಾಜು, ಮೂರ್ತಿ, ಶಿವಣ್ಣ, ಜಯರಾಮು ಹಾಗೂ ಗ್ರಾಮಸ್ಥರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

