ಅಭಿನೇತ್ರಿ ಸಾಂಸ್ಕೃತಿಕ ಸಂಘದಲ್ಲಿ ನುಡಿಹಬ್ಬ
ದೊಡ್ಡಬಳ್ಳಾಪುರ: ಇಲ್ಲಿನ ಅಭಿನೇತ್ರಿ ಸಾಂಸ್ಕೃತಿಕ ಸಂಘದ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ನುಡಿಹಬ್ಬ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು ಮಾತನಾಡಿ ಕನ್ನಡ ಪರಂಪರೆಯನ್ನು ಜೀವಂತವಾಗಿಡಲು ಸಾಂಸ್ಕೃತಿಕ ಚಿಂತನೆ ಬಹಳ ಮುಖ್ಯ. ಮಕ್ಕಳಲ್ಲಿ ವಿಚಾರ ಪ್ರಚೋದನೆ ಮತ್ತು ಸಾಂಸ್ಕೃತಿಕ ಕ್ಷೇತ್ರದ ಕುರಿತ ಆಲೋಚನೆಗಳನ್ನು ಬೆಳೆಸಬೇಕು. ನಾಟಕ, ಸಂಗೀತ, ನೃತ್ಯ, ಸಾಹಿತ್ಯದ ಮೂಲಕ ಭಾಷೆಯನ್ನು ಉಳಿಸಲು ಮತ್ತು ಬೆಳೆಸಲು ಸಾಧ್ಯ. ಇಂತಹ ಪ್ರಯತ್ನವನ್ನು ಸದಾ ಕಾಲ ಮಾಡುತ್ತಿರಬೇಕು. ಆಗ ಮಾತ್ರ ಮಾತೃಭಾಷೆ-ಸಂಸ್ಕೃತಿ ಉಳಿಯುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಮಕ್ಕಳಿಂದ ಏಕಾಂಕ ನಾಟಕಗಳ ಪ್ರದರ್ಶನ ನಡೆಯಿತು. ಹಾಸ್ಯ ಮತ್ತು ವಿಚಾರ ಪ್ರಚೋದಕ ಅಂಶಗಳನ್ನು ಒಳಗೊಂಡಿದ್ದ ಕಿರುನಾಟಕಗಳು ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರವಾದವು. ಪುಟಾಣಿ ಮಕ್ಕಳು ವಿವಿಧ ಬಗೆಯ ವೇಷಭೂಷಣಗಳೊಂದಿಗೆ ವೇದಿಕೆಯಲ್ಲಿ ಕಾಣಿಸಿಕೊಂಡರು. ಜನಪದ ಮತ್ತು ಸಾಂಸ್ಕೃತಿಕ ಸಾಮೂಹಿಕ ನೃತ್ಯ, ಜನಪದ ಮತ್ತು ಭಾವಗೀತೆಗಳ ಗಾಯನ ಕಾರ್ಯಕ್ರಮಗಳು ನಡೆದವು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಣೆ ಮಾಡಲಾಯಿತು.
ಅಭಿನೇತ್ರಿ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಎಚ್.ಎಸ್.ರೇವತಿ ಅಧ್ಯಕ್ಷತೆ ವಹಿಸಿದ್ದರು. ತಾ.ಕಸಾಪ ಅಧ್ಯಕ್ಷ ರವಿಕಿರಣ್, ಗೌರವ ಕಾರ್ಯದರ್ಶಿ ಎಚ್.ಎನ್.ಪ್ರಕಾಶ್, ಕೋಶಾಧ್ಯಕ್ಷ ಎಂ.ಚಿಕ್ಕಣ್ಣ, ಸಂಸ್ಥೆ ವ್ಯವಸ್ಥಾಪಕ ಬಿ. ಅನಂತರಾಂ, ನಿರ್ದೇಶಕಿ ರೇಣುಕಾ ಮತ್ತಿತರರು ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

