ಬೆಂಗಳೂರು ಗ್ರಾಮಾಂತರ

ಪಟೇಲ್ ಆಂಗ್ಲ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

Published On :

ರಾಮನಗರ: ನಗರದ ಪಟೇಲ್ ಆಂಗ್ಲ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಸಿ.ರಾಜು ಅವರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಆಂಗ್ಲ ಭಾಷೆಯ ವ್ಯಾಮೋಹದಿಂದ ಮಾತೃ ಭಾಷೆಯನ್ನು ಕಡೆಗಣಿಸಲಾಗುತ್ತಿದೆ. ಸುಮಾರು 2 ಸಾವಿರ ವರ್ಷಗಳ ಇತಿಹಾಸ ಇರುವ ಕನ್ನಡ ಭಾಷೆಯ ಕಡೆಗಣನೆ ಸಲ್ಲದು. ಭಾಷೆ ಅಳಿದರೆ ನಮ್ಮ ಸಂಸ್ಕೃತಿಯೇ ನಾಶವಾಗಲಿದೆ. ಆದ್ದರಿಂದ ಕನ್ನಡ ಭಾಷೆಗೆ ಹೆಚ್ಚು ಉತ್ತೇಜನ ನೀಡಬೇಕು ಎಂದರು.  ಶೈಕ್ಷಣಿಕ ವ್ಯವಸ್ಥೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆ ಎಂದು ವಿಂಗಡಣೆ ಮಾಡಿರುವುದೂ ಕನ್ನಡದ ಅಳಿವಿಗೆ ಒಂದು ಕಾರಣವಾಗಿದೆ. ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಶಾಲೆಗಳಲ್ಲೂ ಕನ್ನಡವನ್ನೇ ಪ್ರಥಮ ಭಾಷೆಯಾಗಿ ಅಭ್ಯಸಿಸುವಂತಾಗಬೇಕು ಎಂದು ಹೇಳಿದರು. ಸಮಾಜ ಸೇವಕರಾದ ಶಂಭುಗೌಡ, ಉಮೇಶ್, ಡಾ.ರಾಜ್‌ಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷ ರಾ.ಶಿ.ಬಸವರಾಜು, ಶಿಕ್ಷಕರಾದ ನಾಗಲಕ್ಷ್ಮಮ್ಮ, ಎಂ.ರಾಜು, ಶೀಲಾ, ಜಿ.ಆರ್. ವಿನೋದ್ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.