ಬೆಂಗಳೂರು ಗ್ರಾಮಾಂತರ

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ವಿಸ್ತರಣೆ

Published On :

ರಾಮನಗರ: ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯವನ್ನು ಡಿ.6ರವರೆಗೆ ವಿಸ್ತರಿಸಿದೆ. ಈ ನಿಟ್ಟಿನಲ್ಲಿ ಜಿಲ್ಲಾ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಇರುವ ಮೂರು ದಿನಗಳ ಕಾಲಾವಧಿಯಲ್ಲಿ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಿ ಪರಿಷ್ಕರಣೆಯನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಡಿ.ಎಸ್. ವಿಶ್ವನಾಥ್ ಅಧಿಕಾರಿಗಳಿಗೆ ಸೂಚಿಸಿದರು.
ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ 2014ರ ಸಂಬಂಧ ಭಾವಚಿತ್ರವಿರುವ ಮತದಾರರು ಹಾಗೂ ಗುರುತಿನ ಚೀಟಿಯಲ್ಲಿನ ಲೋಪ ದೋಷಗಳನ್ನು ಸರಿಪಡಿಸುವ ಕುರಿತು ಸೋಮವಾರ ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಮುಖ್ಯಾಧಿಕಾರಿಗಳು, ತಾ.ಪಂ. ಇಒಗಳು, ತಹಸೀಲ್ದಾರ್‌ಣಗಳು ಹಾಗೂ ಪಿಡಿಒಗಳಿಗೆ ಸಲಹೆ ನೀಡಲು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಭಾವಚಿತ್ರ ಹೊಂದಿಲ್ಲದ 1771, ರಾಮನಗರ 3763, ಕನಕಪುರ 5515 ಹಾಗೂ ಚನ್ನಪಟ್ಟಣ ಕ್ಷೇತ್ರದಲ್ಲಿ 3589 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟಾರೆ 14,638 ಭಾವಚಿತ್ರ ಇಲ್ಲದ ಮತದಾರರಿದ್ದಾರೆ. ಅಂತೆಯೇ ಮಾಗಡಿಯಲ್ಲಿ 1320, ರಾಮನಗರ 3317, ಕನಕಪುರ 4317, ಚನ್ನಪಟ್ಟಣ 2944 ಮತದಾರರು ಒಟ್ಟಾರೆ 11,898 ಮತದಾರರ ಗುರುತಿನ ಚೀಟಿಯನ್ನು ಹೊಂದಿರುವುದಿಲ್ಲ. ಇಂತಹ ಮತದಾರರ ಮನೆಗಳಿಗೆ ತೆರಳಿ ಭಾವಚಿತ್ರ ಸಂಗ್ರಹಿಸುವ ಕೆಲಸ ಆಗಬೇಕಿದ್ದು, ಶೇ.100ರಷ್ಟು ಯಶಸ್ವಿಗೊಳಿಸಬೇಕೆಂದು ಅವರು ಹೇಳಿದರು.
ಮನೆಯಲ್ಲಿ ಮತದಾರರು ಇಲ್ಲದ ಪಕ್ಷದಲ್ಲಿ ಅವರ ಮನೆಯ ಬಾಗಿಲ ಮೇಲೆ ವಿವರಗಳನ್ನು ಒಳಗೊಂಡ ನೋಟಿಸ್ ಪ್ರತಿಯನ್ನು ಹಾಗೂ ಸಂಪರ್ಕಿಸಬೇಕಾದ ಅಧಿಕಾರಿಯ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ಇದರಿಂದ ಮತದಾರರು ಅಧಿಕಾರಿಗಳನ್ನು ಸಂಪರ್ಕಿಸಲು ಅನುಕೂಲವಾಗಲಿದೆ ಎಂದರು.
ಜಿಲ್ಲೆಯಲ್ಲಿನ ಸುಮಾರು 44 ಸಾವಿರ ಮತದಾರರ ಪಟ್ಟಿಯಲ್ಲಿ ಲೋಪದೋಷಗಳಿವೆ. ತಿದ್ದುಪಡಿ, ಸೇರ್ಪಡೆ, ಭಾವಚಿತ್ರ ಸಂಗ್ರಹಿಸಲು, ಹೊಸದಾಗಿ ಪಟ್ಟಿಗೆ ಸೇರ್ಪಡೆಗೊಳ್ಳಲು ನಮೂನೆ 6ನ್ನು ಪಡೆಯಲು ಡಿ.6ರ ವರೆಗೆ ಅವಕಾಶವಿರುವುದರಿಂದ ತ್ವರಿತಗತಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಎಲ್ಲಾ ಪಿಡಿಒಗಳು ನಗರ ಪ್ರದೇಶಗಳಲ್ಲಿ ಆಯುಕ್ತರು, ಮುಖ್ಯಾಧಿಕಾರಿಗಳ ನೇತಣತ್ವದಲ್ಲಿ ಈ ಕಾರ್ಯವನ್ನು ಕೈಗೊಳ್ಳುವಂತೆ ಹೇಳಿದರು.
18 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನ ಮತದಾರರು ಈಗ ನಡೆಯುತ್ತಿರುವ ಪರಿಷ್ಕರಣೆ ಕಾರ್ಯದಲ್ಲಿ ಸೇರ್ಪಡೆಗೊಳಿಸಿ ಪ್ರಜಾಪ್ರಭುತ್ವದ ಪವಿತ್ರ ಹಕ್ಕನ್ನು ಯುವ ಮತದಾರರಿಗೆ ಕೊಡಿಸಲು ಪಿಡಿಒಗಳು ಕಾರ್ಯೋನ್ಮುಕರಾಗುವಂತೆ ಕರೆ ನೀಡಿದರು.
ಮುಂಬರುವ ಲೋಕಸಭಾ ಚುನಾವಣೆಗೆ ಶೇ.100ರಷ್ಟು ಲೋಪದೋಷ ರಹಿತ ಮತದಾರರ ಪಟ್ಟಿ ತಯಾರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸಂಗ್ರಹಿಸಿದ ಭಾವಚಿತ್ರಗಳು ಹಾಗೂ ನಮೂನೆಗಳನ್ನು ತಾಲೂಕು ಕಚೇರಿಗಳಿಗೆ ಕೊನೆಯ ದಿನಾಂಕವಾದ ಡಿ.6 ರೊಳಗೆ ಸಲ್ಲಿಸುವಂತೆ ಸೂಚಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಬಸವರಾಜು, ಚುನಾವಣಾ ನೋಡಲ್ ಅಧಿಕಾರಿ ಹಾಗೂ ವಿಶೇಷ ಭೂಸ್ವಾಧಿನ ಅಧಿಕಾರಿ ಜಯಮಾಧವ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.