ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟ

Published On :

ಕ.ಪ್ರ.ವಾರ್ತೆ   ದೊಡ್ಡಬಳ್ಳಾಪುರ   ಡಿ.3
ಮಾದಕ ವಸ್ತುಗಳ ಅಪಾಯದ ಕುರಿತು ರಾಜ್ಯದೆಲ್ಲೆಡೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಬೆಚ್ಚಿ ಬೀಳುವ ಸುದ್ದಿಯೊಂದು ದೊಡ್ಡಬಳ್ಳಾಪುರದಲ್ಲಿ ಸ್ಪೋಟಗೊಂಡಿದೆ. ದೇಶದ ಭವಿಷ್ಯದ ಆಸ್ತಿ ಎನ್ನುವ ಯುವಜನರನ್ನೇ ಗುರಿಯಾಗಿಟ್ಟುಕೊಂಡು ಎಗ್ಗಿಲ್ಲದೆ ನಡೆಯುತ್ತಿರುವ ಮಾದಕ ವಸ್ತುಗಳ ಪೂರೈಕೆ ಭರಾಟೆ ಈಗ ಚರ್ಚೆಯ ವಿಷಯ. ಇಲ್ಲಿನ ಶಾಲಾ-ಕಾಲೇಜುಗಳ ಬಳಿಯಲ್ಲೇ ಗಾಂಜಾ ಮಾರಾಟ ಜಾಲ ಕಂಡುಬಂದಿರುವುದು ಆತಂಕದ ವಿಚಾರ.
ಇಲ್ಲಿನ ಪ್ರತಿಷ್ಠಿತ ಕಾಲೇಜೊಂದರ ಮುಂದೆ ವಿಕಲಚೇತನ ವ್ಯಕಿಯೊಬ್ಬ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದಾನೆ ಎಂಬ ಅಂಶ ಮಾಧ್ಯಮಗಳ ಕಾರ್ಯಾಚರಣೆಯಿಂದ ಬಯಲಾಗಿದೆ. ಈ ಬಗ್ಗೆ ಹಲವು ಬಾರಿ ಪೊಲೀಸರಿಗೆ ಮಾಹಿತಿ, ದೂರು ರವಾನೆಯಾಗಿದ್ದರೂ ದೊಡ್ಡಬಳ್ಳಾಪುರ ಪೊಲೀಸರು ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿಕಲಚೇತನ ವ್ಯಕ್ತಿಯೊಬ್ಬ ಗಾಂಜಾ ಸೊಪ್ಪು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮತ್ತು ದಾಖಲೆ ಮಾಧ್ಯಮಗಳಿಗೆ ಲಭ್ಯವಾಗಿದೆ.
ಆ ವ್ಯಕ್ತಿಯ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹೆಚ್ಚಾಗಿ ನಂಟು ಹೊಂದಿದ್ದಾರೆ ಎನ್ನಲಾಗಿದೆ. ಇಲ್ಲಿನ ಕೆಲ ಕಾಲೇಜುಗಳ ವಿದ್ಯಾರ್ಥಿಗಳು ಈತನ ಬಳಿ ನಿರಂತರವಾಗಿ ಗಾಂಜಾ ಕೊಳ್ಳುತ್ತಿದ್ದಾರೆ ಎಂಬ ಸ್ಫೋಟಕ ಮಾಹಿತಿ ಜನರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಈ ವ್ಯಕ್ತಿಗೆ ಗಾಂಜಾ ಪೂರೈಕೆ ಮಾಡುತ್ತಿರುವುದು ಯಾರು ಈ ಜಾಲ ಎಲ್ಲೆಲ್ಲಿ ತನ್ನ ಕರಾಳ ಮುಖ ಚಾಚಿದೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಿದೆ.
ಸ್ಥಳೀಯವಾಗಿ ಸಣ್ಣ ಬಾಡಿಗೆ ಕೊಠಡಿಯೊಂದರಲ್ಲಿ ವಾಸವಿರುವ ಈತನ ಚಲನ-ವಲನಗಳು ಅನುಮಾನಾಸ್ಪದವಾಗಿದ್ದರೂ, ಕಳೆದ 2-3 ವರ್ಷಗಳಿಂದ ಈ ದಂಧೆ ನಡೆಯುತ್ತಿದ್ದರೂ ಯಾವುದೇ ಗಂಭೀರ ಕ್ರಮ ಜರುಗದೇ ಇರುವುದು ಅನುಮಾನಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.