ಮಕ್ಕಳಲ್ಲಿನ ಪ್ರತಿಭೆಗಳಿಗೆ ಒತ್ತು ನೀಡಿ: ಗುರುರಾಜ್
ವಿಜಯಪುರ: ಪ್ರತಿ ವಿಚಾರಗಳನ್ನು ಸೂಕ್ಷ್ಮ ರೀತಿಯಲ್ಲಿ ಗ್ರಹಿಸುವ ಶಕ್ತಿ ಫ್ರೌಢಾವಸ್ಥೆಯದ್ದಾಗಿದ್ದು ಶಿಕ್ಷಕರು ಶಿಕ್ಷಣ ನೀಡುವ ಜೊತೆಗೆ ಸೂಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಮಕ್ಕಳು ಮುಂದಿನ ದಿನಗಳಲ್ಲಿ ಉತ್ತಮ ಸಾಧಕರಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದು ಬೆಂ.ಗ್ರಾ.ಉಪನಿರ್ದೇಶಕ ಗುರುರಾಜ್ ತಿಳಿಸಿದರು. ಇವರು ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಕ್ಕಳಲ್ಲಿನ ಸಮಯೋಚಿತ ಪ್ರಜ್ಞೆಯನ್ನು ಪೋಷಕರು ಗುರುತಿಸಬೇಕು. ಈ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿ ಸಾಕಷ್ಟು ಬದಲಾವಣೆಗಳನ್ನು ಕಾಣಬಹುದು. ಅವರ ಪ್ರತಿಭೆಗಳನ್ನು ಪ್ರದರ್ಶಿಸಲೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ ಎಂದರು. ಕಾಲೇಜಿನ ಉಪಪ್ರಾಂಶುಪಾಲ ರಾಮಚಂದ್ರ ಮಾತನಾಡಿ ಹಂತ ಹಂತವಾಗಿ ನಡೆಯುವ ಈ ಕಾರ್ಯಕ್ರಮಗಳಲ್ಲಿ ವಿಜೇತರಾದ ಮಕ್ಕಳನ್ನು ತಾಲೂಕು, ನಂತರ ಜಿಲ್ಲೆ, ರಾಜ್ಯ, ರಾಷ್ಟ್ರ ಹೀಗೆ ಮುಂದುವರೆಯುತ್ತಾ ಮೇಲ್ಮಟ್ಟಕ್ಕೆ ಏರಬಹುದು. ಈ ನಿಟ್ಟಿನಲ್ಲಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆಂದೇ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ಎಸ್ಡಿಎಂಸಿ ಅಧ್ಯಕ್ಷ ಹಾಗೂ ಪುರಸಭಾ ಮಾಜಿ ಸದಸ್ಯ ದೇವರಾಜ್ ಮಾತನಾಡಿ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯಬೇಕಾದರೆ ಹಾಗೂ ದೈಹಿಕವಾಗಿ ಬಲಾಢ್ಯರಾಗಬೇಕಾದರೆ ಪಾಠಗಳ ಜೊತೆಗೆ ಆಟಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

