ಶಿಕ್ಷಕ ಬಡಾವಣೆಯಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಚಾಲನೆ
ಸೂಲಿಬೆಲೆ: ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮದಲ್ಲಿರುವ ಶಿಕ್ಷಕರ ಬಡಾವಣಿಯಲ್ಲಿನ ರಸ್ತೆಯ ಕಾಂಕ್ರಿಟ್ ಕಾಮಗಾರಿಗೆ ಹೊಸಕೋಟೆ ತಾಪಂ ಮಾಜಿ ಅಧ್ಯಕ್ಷ ಟಿ.ಎಸ್. ರಾಜಶೇಖರ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಶಿಕ್ಷಕರ ಬಡಾವಣಿಯಲ್ಲಿ ಮೂಲ ಸೌಲಭ್ಯಗಳನ್ನು ಕಲ್ಪಿಸುವ ದೃಷ್ಟಿಯಿಂದ ತಾಪಂ ಅನುಧಾನದಡಿಯಲ್ಲಿ ರು.4 ಲಕ್ಷ ಹಣ ಬಿಡುಗಡೆಯಾಗಿದ್ದು, ರಸ್ತೆ ಅಭಿವೃದ್ಧಿ ಕಾಣಲಿದೆ. ಈ ವ್ಯಾಪ್ತಿಯಲ್ಲಿರುವ ಹಳ್ಳಿಗಳ ಜನರಿಗೆ ಉಂಟಾಗಿರುವ ಕುಡಿಯುವ ನೀರು ಸಮಸ್ಯೆಯನ್ನು ಬಗೆಹರಿಸಲು ಕೊಳವೆ ಬಾವಿಗಳನ್ನು ಕೊರೆಯಿಸಿ ಅದಕ್ಕೆ ಪಂಪ್, ಮೋಟಾರ್ಗಳನ್ನು ಅಳವಡಿಸಲಾಗಿದೆ. ಗ್ರಾಮೀಣ ಭಾಗದಲ್ಲಿರುವ ಹಳ್ಳಿಗಳಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಪ್ರದೇಶದಲ್ಲಿ ರಸ್ತೆ ಕಾಮಗಾರಿಗಳನ್ನು ನಡೆಸಲಾಗುವುದು. ಗುತ್ತಿಗೆದಾರರು ಗುಣಮಟ್ದ ಕಾಮಗಾರಿಯನ್ನು ನಡೆಸಿ ಜನರಿಗೆ ಅನುಕೂಲ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖಂಡರಾದ ದೇವರಾಜ್, ತಾಪಂ ಮಾಜಿ ಸದಸ್ಯ ನರಸಿಂಹಯ್ಯ, ಮಾರುತೇಶ್, ಮೊದಲಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

