ಶೈಕ್ಷಣಿಕ ವ್ಯವಸ್ಥೆಯಲ್ಲಿ ಗುಣಾತ್ಮಕ ಬದಲಾವಣೆ ತರಲು ಕಾರ್ಯಕ್ರಮ: ಸತ್ಯನಾರಾಯಣ
ಚನ್ನಪಟ್ಟಣ ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಇಲಾಖೆ ಮಕ್ಕಳಲ್ಲಿನ ಬಹುಮುಖ ಪ್ರತಿಭೆಯನ್ನು ಹೊರತೆಗೆಯಲು ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶೈಕ್ಷಣಿಕ ವ್ಯವಸ್ಥೆಯಲ್ಲಿ ಗುಣಾತ್ಮಕ ಬದಲಾವಣೆ ತರಲು ಮುಂದಾಗಿದೆ ಎಂದು ರಕ್ಷಣಾವೇದಿಕೆ ಜಿಲ್ಲಾ ಕಾರ್ಯಾಧ್ಯಕ್ಷ ಎಂ.ಎನ್.ಸತ್ಯನಾರಾಯಣ ತಿಳಿಸಿದರು.
ಇಲ್ಲಿನ ಮಂಗಳವಾರ ಪೇಟೆ ಸರ್ಕಾರಿ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕೆಲವರ್ಷಗಳಿಂದ ಆಚರಿಸಿ ಕೊಂಡು ಬರುತ್ತಿರುವ ಪ್ರತಿಭಾ ಕಾರಂಜಿ ಸರ್ಕಾರಿ ಶಾಲಾಮಕ್ಕಳಲ್ಲಿನ ಪ್ರತಿಭೆಯನ್ನು ಹೊರತರಲು ನೀಡಿರುವ ಉತ್ತಮ ಅವಕಾಶ ವಾಗಿದೆ ಎಂದರು.
ಇಂತಹ ಕಾರ್ಯಕ್ರಮಗಳ ಯಶಸ್ವಿಗೆ ಕೇವಲ ಶಿಕ್ಷಣ ಇಲಾಖೆಯನ್ನೇ ನಂಬದೇ ಸಾರ್ವಜನಿಕರೂ ಸಹಕಾರ ನೀಡಿದಲ್ಲಿ ಉತ್ತಮ ಮಟ್ಟದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಬಹುದಾಗಿದೆ ಎಂದು ಅಭಿಪ್ರಾಯಪಟ್ಟ ಅವರು, ಇಂತಹ ಕಾರ್ಯಕ್ರಮಗಳಿಗೆ ವೈಯಕ್ತಿವಾಗಿ ಕೈಲಾದ ಸಹಾಯ ನೀಡುವುದಾಗಿ ತಿಳಿಸಿದರು.
ಮುಖ್ಯ ಶಿಕ್ಷಕ ವಸಂತಕುಮಾರ್, ಪ್ರತಿಭಾ ಕಾರಂಜಿಯಿಂದ ಸಾಕಷ್ಟು ಮಕ್ಕಳು ತಾಲೂಕು, ಜಿಲ್ಲೆ, ರಾಜ್ಯಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣ ಗೊಳಿಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ಸೂಕ್ತವಾದ ವೇದಿಕೆ ಸಿಕ್ಕಿ ಅವರು ತಮ್ಮಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಅನಾವರಣ ಗೊಳಿಸಲು ಸೂಕ್ತವಾದ ವೇದಿಕೆ ನಿರ್ಮಿಸಲು ಇದು ಅಗತ್ಯವಾಗಿದೆ ಎಂದು ತಿಳಿಸಿದ ಅವರು ಶಾಲೆಯಿಂದ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಎಸ್ಡಿಎಂಸಿ ಅಧ್ಯಕ್ಷ ಡಿ.ಕೆ. ಅಂಕೇಗೌಡ, ಕ್ಲಸ್ಟರ್ ಸಂಯೋಜಕ ಬಿ.ಆರ್.ಹರಿದಾಸ್, ದೇವರಾಜು, ಮುಖ್ಯ ಶಿಕ್ಷಕ ಪುಟ್ಟರಂಗಯ್ಯ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಬಿ.ನಿರ್ಮಲಾ, ಲಲಿತಮ್ಮ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

