ಉಚಿತ ಆರೋಗ್ಯ ತಪಾಸಣಾ ಶಿಬಿರ
ರಾಮನಗರ: ಬಿಡದಿ ಬಳಿಯ ವಂಡರ್ ಲಾ ಹಾಲಿಡೇಸ್ ಲಿಮಿಟೆಡ್ ಸಂಸ್ಥೆಯ ಆವರಣದಲ್ಲಿ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರದಲ್ಲಿ ಅಕ್ಕಪಕ್ಕದ ಗ್ರಾಮಗಳಾದ ಜಡೇನಹಳ್ಳಿ, ಬನ್ನಿಕುಪ್ಪೆ, ವಾಜರಹಳ್ಳಿ, ಮಂಚನಾಯಕನಹಳ್ಳಿ, ಹಕ್ಕಿಪಿಕ್ಕಿ ಕಾಲೋನಿ, ಕರೇನಹಳ್ಳಿ, ಸಿದ್ಧಬೋವಿ ಪಾಳ್ಯ, ಬೆತ್ತನಗೆರೆ ಮತ್ತು ಗಾಣಕಲ್ನಿಂದ ಸುಮಾರು 250ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆದುಕೊಂಡರು. ವಂಡರ್ಲಾ ಸಂಸ್ಥೆಯು ಕೇವಲ ಮನರಂಜನೆಗಷ್ಟೇ ಸೀಮಿತವಾಗದೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಅಕ್ಕಪಕ್ಕದ ಗ್ರಾಮಸ್ಥರ ಅನುಕೂಲಕ್ಕಾಗಿ ಸಂಸ್ಥೆಯ ಆವರಣದಲ್ಲಿ ಉಚಿತ ಚಿಕಿತ್ಸಾಲಯವನ್ನೂ ಪ್ರಾರಂಭಿಸಿದೆ. ವಾರದ ಏಳು ದಿನವೂ ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಚಿಕಿತ್ಸಾಲಯ ತೆರೆದಿರುತ್ತದೆ. ಗ್ರಾಮಸ್ಥರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.
ನಾಳೆ ಬೆಸ್ಕಾಂನಿಂದ ಗ್ರಾಹಕರ ಸಭೆ
ರಾಮನಗರ: ಬೆಸ್ಕಾಂನಿಂದ ಡಿ.6ರ ಮಧ್ಯಾಹ್ನ 3ಕ್ಕೆ ಚನ್ನಪಟ್ಟಣ ಉಪ ವಿಭಾಗೀಯ ಕಚೇರಿ ಆವರಣದಲ್ಲಿ ಗ್ರಾಹಕರ ಸಭೆ ನಡೆಯಲಿದೆ. ತಾಲೂಕಿನ ಗ್ರಾಹಕರು ತಮ್ಮ ಕುಂದು ಕೊರತೆಗಳನ್ನು ಸಲ್ಲಿಸಬಹುದು ಎಂದು ಎಇಇ ತಿಳಿಸಿದ್ದಾರೆ.
ನಾಳೆ ಅಂಬೇಡ್ಕರ್ ಪುಣ್ಯತಿಥಿ ಆಚರಣೆ
ರಾಮನಗರ: ಜಿಲ್ಲಾಡಳಿತದಿಂದ ಡಿ.6ರ ಬೆಳಗ್ಗೆ 10ಕ್ಕೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯ ತಿಥಿಯನ್ನು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸಾರ್ವಜನಿಕರು, ದಲಿತ ಒಕ್ಕೂಟದ ಸಂಚಾಲಕರು ಮತ್ತು ಪದಾಧಿಕಾರಿಗಳು, ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು, ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಸಂಘ ಸಂಸ್ಥೆಯ ಪದಾಧಿಕಾರಿಗಳು, ಹಾಗೂ ಎಲ್ಲಾ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸುವಂತೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕೋರಿದ್ದಾರೆ.
ಇಂದು ಏಡ್ಸ್ ಅರಿವು ಜಾಥಾ ಕಾರ್ಯಕ್ರಮ
ರಾಮನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಡಿ.5ರ ಬೆಳಗ್ಗೆ 9ಕ್ಕೆ ವಿಶ್ವ ಏಡ್ಸ್ ದಿನದ ಅಂಗವಾಗಿ ನಗರದ ಜಿಲ್ಲಾಸ್ಪತ್ರೆಯಿಂದ ಎಂ.ಎಚ್.ಕಾಲೇಜಿನವರೆಗೆ ಏಡ್ಸ್ ಅರಿವು ಜಾಥಾ ಕಾರ್ಯಕ್ರಮ ನಡೆಯಲಿದೆ. ನಂತರ ಎಂ.ಎಚ್. ಕಾಲೇಜು ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

